ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024ಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತೊಂದು
ಅಧಿಸೂಚನೆ ಹೊರಡಿಸಿದೆ.
ಈ ಪ್ರಕಾರ ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದ್ದ 22.08.2024ನ್ನು 28.08.2024 ರವರೆಗೆ ವಿಸ್ತರಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ ಪರಿಣಾಮ ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೊಮ್ಮೆ 02.09.2024ಕ್ಕೆ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು ಇನ್ನು ದಿನಾಂಕ ವಿಸ್ತರಣೆ ಮಾಡುವುದಿಲ್ಲ
ಎಂದು ಸರಕಾರ ವಿಧ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.