ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯು ಬಿಜೆಪಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು ಇನ್ನೂ ಇವರ ಎದುರಾಳಿಯಾಗಿ ಕಾಂಗ್ರೆಸ್ನಿಂದ ವಿನೋದ್ ಅಸೂಟಿ ಅವರು ನಿಂತಿದ್ದರು, ಇದೀಗ ವಿನೋದ್ ಅಸೂಟಿ ಅವರನ್ನು ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಶಿಯವರು 6,84,837 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ನ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು 4,79,765 ಮತಗಳನ್ನು ಪಡೆದಿದ್ದರು. ಪ್ರಹ್ಲಾದ್ ಜೋಶಿಯವರು ವಿನಯ್ ಕುಲಕರ್ಣಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.