BANGALORE: ಉರಿಗೌಡ, ನಂಜೇಗೌಡರ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಸಚಿವ ಮುನಿರತ್ನ ಈ ಹೆಸರಿನಲ್ಲಿ ಸಿನಿಮಾ ಮಾಡಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ದಾಖಲಿಸಿರುವುದು ಮಾಜಿ
ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ.
ಹಾಸನ ಪ್ರವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಸಮಾಜದ ಛಿದ್ರ ಮಾಡುವ ಹಾಗೂ ಒಡೆದಾಳುವ ನೀತಿ. ವಿನೇಶಕಾಲೇ ವಿಪರೀತ ಬುದ್ದಿ ಬಿಜೆಪಿಯದ್ದು. ಉರಿಗೌಡ, ನಂಜೇಗೌಡರ ಹೆಸರು ಹೇಳಿ ವಿಷಕಾರುತ್ತಿದ್ದಾರೆ. ಸಚಿವ ಅಶ್ವತ್ಥ ನಾರಾಯಣ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಒಕ್ಕಲಿಗ ಸಮುದಾಯ ಒಡೆಯಲು,
ಸಿಟಿ ರವಿಯಂಥ ಲೂಟಿಕೋರನಿಂದ ಪಾಠ ಕಲಿಯಬೇಕಾಗಿಲ್ಲ. ಹಾಸನ ಜಿಲ್ಲೆಯು ಕುವೆಂಪು ಅವರಂಥ ಸರ್ವಜನಾಂಗದ ಶಾಂತಿಯ ತೋಟ ಎಂಬಂತಿದೆ. ಟಿಪ್ಪು, ಉರಿಗೌಡ, ನಂಜೇಗೌಡರಂಥ ಇತಿಹಾಸ ಇಲ್ಲ ಎಂದು ಹೇಳಿದ್ದಾರೆ.
ಈ ವಿಚಾರ ಸಂಬಂಧ ಸರಣಿ ಟ್ವೀಟ್ (TWEET) ಮಾಡಿರುವ ಕುಮಾರಸ್ವಾಮಿ ಬೆಂಕಿಯುಗುಳಿದಿದ್ದಾರೆ.
H.D. KUMARASWAMY TWEET
ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ @BJP4Karnataka ಗೆ ಇರುವುದಂತೂ ಸತ್ಯ.
ಒಕ್ಕಲಿಗರ ಮೇಲೆ ಬಿಜೆಪಿ_ವಕ್ರದೃಷ್ಟಿ
ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು @BJP4Karnataka ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.