SUDDIKSHANA. COM KANNADA NEWS
DATE:17-03-2023
DAVANAGERE
ದಾವಣಗೆರೆ: ಯುರೋಪ್, ಅಮೆರಿಕಾ (AMERICA) ಕ್ಕೆ ಹೋಗಿ ಭಾರತ (INDIA) ದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ (CONGRESS) ಪಕ್ಷವನ್ನು ದೇಶದ ಜನತೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಕರ್ನಾಟಕದಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇಲ್ಲಿನ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭವಿಷ್ಯ ನುಡಿದರು.
ನಗರದ ಜಿಎಂಐಟಿ (GMIT) ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರ, ಪ್ರಜಾಪ್ರಭುತ್ವದ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ರಾಹುಲ್ ಗಾಂಧಿ ದೇಶಕ್ಕೆ ಅಪಮಾನ ಮಾಡಿದ್ದಾರೆ. ಭಾರತ್ ಜೊಡೋ ಯಾತ್ರೆ ರಾಹುಲ್ ಗಾಂಧಿ ಮಾಡಿದ್ದಾರೆ. ಆದರೂ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP)ಯು 150 ಸ್ಥಾನಗಳಲ್ಲಿ ಗೆಲ್ಲಲಿದೆ. ಮಾರ್ಚ್ 25ಕ್ಕೆ ದಾವಣಗೆರೆಯಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆಯ ಸಮಾರೋಪದ ಮಹಾಸಂಗಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಹತ್ತು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದು ತಿಳಿಸಿದರು.
ವಿಜಯ ಸಂಕಲ್ಪ ಯಾತ್ರೆ ಎಲ್ಲೆಡೆ ನಡೆಯುತ್ತಿದೆ. ಕರ್ನಾಟಕ (KARNATAKA) ದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜನರೂ ಬಿಜೆಪಿಯ ಬಗ್ಗೆ ಒಲವು ಹೊಂದಿರುವುದು ಈ ಮೂಲಕ ಸ್ಪಷ್ಟವಾಗಿದೆ. ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಹೆಲಿಕಾಪ್ಟರ್ ರೂಪಿಸುವ ಕಾರ್ಖಾನೆ ಸೇರಿದಂತೆ ಹಲವು ಅಭಿವೃದ್ಧಿಗಳಿಗೆ ಚಾಲನೆ ನೀಡಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ಸರ್ಕಾರ ಅಭಿವೃದ್ಧಿ ಮಹಾಪೂರವನ್ನೇ ಹರಿಸಿದೆ. ಜನರಿಗೆ ಈ ಕಾರ್ಯಕ್ರಮಗಳು ತಲುಪಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಮತ್ತೆ ಡಬಲ್ ಎಂಜಿನ್ ಸರ್ಕಾರವೇ ಅಧಿಕಾರದಲ್ಲಿ ಇರಬೇಕು. ಹಾಗಾಗಿ, ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಿ ಕೆಲಸ ಮಾಡುವಂತೆ ಕರೆ ನೀಡಿದರು.
ಕರ್ನಾಟಕದ ಬಗ್ಗೆ ಮೋದಿ (MODI) ಅವರಿಗೆ ತುಂಬಾನೇ ಪ್ರೀತಿ. ಇಲ್ಲಿನ ಜನರ ಬಗ್ಗೆಯೂ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ದಾವಣಗೆರೆಗೆ ಆಗಮಿಸುವ ಅವರು ಕಾರ್ಯಕರ್ತರನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ನೋಡಿ ಬಿಜೆಪಿ ಬೆಂಬಲಿಸಿ ಎಂದು ಹೇಳಿದರು.