ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ತೆರಿವಿಗೆ ಕ್ರಮ: ಡಿಸಿ DC ORDER

On: March 16, 2023 12:24 PM
Follow Us:
---Advertisement---

ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ತೆರಿವಿಗೆ ಕ್ರಮ: ಡಿಸ

ದಾವಣಗೆರೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ನ್ಯಾಯಸಮ್ಮತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತದಾರರಿಗೆ ಮತಯಂತ್ರಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದರು.

ನಗರದ ಪ್ರೆಸ್ ಕ್ಲಬ್‍ನಲ್ಲಿ ಗುರುವಾರ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಂಬರುವ ವಿಧಾನಸಭಾ ಚುನಾವಣೆ -2023ರ ಸಿದ್ದತೆಗಳ ಕುರಿತಂತೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು ಈಗಾಗಲೇ ಜಿಲ್ಲೆಯಲ್ಲಿ ಜ್ಯೂಡಿಷಿಯಲ್ ಅಧಿಕಾರಿಗಳಿಗೆ, ಬಾರ್ ಅಸೋಷಿಯನ್ ಸದಸ್ಯರಿಗೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಿಗೆ ಮತದಾನ ಹಾಗೂ ಮತಯಂತ್ರಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಇಂದು ಮಾಧ್ಯಮದವರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಏಳು ಮತಕ್ಷೇತ್ರಗಳಿದ್ದು, 1683 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎರಡು ಹೆಚ್ಚುವರಿ ಮತಗಟ್ಟೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ನಿರಂತರವಾಗಿ ಪ್ರಗತಿಯಲಿದೆ ಎಂದರು.

ಬ್ಯಾನರ್ ಬಂಟಿಂಗ್ಸ್ ತೆರವು:

ಚುನಾವಣೆ ನೀತಿ ಸಂಹಿತೆ ಜಾರಿಯಾಗದಿದ್ದರೂ ಜಿಲ್ಲೆಯಲ್ಲಿ ಇತರೆ ಕಾನೂನಿನ ಅನ್ವಯ ಅನಧಿಕೃತ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆಯ ನಗರ ಪಟ್ಟಣ ಪ್ರದೇಶಗಳಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ.

ದಾವಣಗೆರೆ, ಹರಿಹರ, ಚನ್ನಗಿರಿ, ಮಲೆಬೆನ್ನೂರು ಸೇರಿದಂತೆ ಪಟ್ಟಣ ಪ್ರದೇಶಗಳಲ್ಲಿ ಅನುಮತಿ ಇಲ್ಲದ ಹಾಕಲಾದ ಹೋರ್ಡಿಂಗ್ಸ್, ಬ್ಯಾನರ್, ಬಂಟಿಂಗ್ಸ್‍ಗಳ ತೆರವಿಗೆ ನಿರ್ದೇಶನ ನೀಡಲಾಗಿದೆ. ಈವರೆಗೆ 16 ವಾಲ್‍ಪೇಂಟ್, 244 ಪೋಸ್ಟರ್ಸ್, (POSTERS), 117 ಬ್ಯಾನರ್ಸ್ (BANARS) ಸೇರಿ 509 ಪ್ರಚಾರ ಫಲಕಗಳನ್ನು ತೆರವು ಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಮದ್ಯ ವಶ: ಮಾರ್ಚ್ 6 ರಿಂದ 15ರವರೆಗೆ ವಿವಿಧ ಕಡೆಗಳಲ್ಲಿ ದಾಳಿಮಾಡಿ ಅನುಮತಿ ಇಲ್ಲದೆ ಮಾರಾಟ ಮಾಡುತ್ತಿದ್ದ 122 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನಿಂತಿ ಸಂಹಿತೆ ಜಾರಿಯಾಗಿಲ್ಲವಾದರೂ ಸಹ ಸಾಮಾನ್ಯವಾಗಿ ಸಾರ್ವಜನಿಕರಿಗೆ ಹಂಚಲು ಸಂಗ್ರಹಿಸಲಾಗುತ್ತಿರುವ ಟಿವಿ, ಫ್ರೆಸರ್ ಕುಕ್ಕರ್, ಸಾರಿ ಸೇರಿದಂತೆ ವಿವಿಧ ವಸ್ತುಗಳ ಕುರಿತು ನಿಗಾವಹಿಸಲಾಗುತ್ತಿದೆ. ನಾನೇ ಖುದ್ದಾಗಿ ಅನೇಕ ಕಡೆ ಭೇಟಿ ನೀಡಿದ್ದೇನೆ. ಈವರೆಗೆ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದರೆ ಕ್ರಮಕೈಗೊಳ್ಳಲಾಗುವುದು ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment