Site icon Kannada News-suddikshana

ಜುವೆಲ್ಲರಿ ಅಂಗಡಿ ಮೇಲೆ ಐಟಿ ದಾಳಿ- 26 ಕೋಟಿ ರೂ. ನಗದು ಹಣ ಜಪ್ತಿ

ಮುಂಬೈ: ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ.

ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ನಗದು ಹಣವನ್ನು ಹಲವು ಚೀಲಗಳಲ್ಲಿ ತುಂಬಿ ಇಡಲಾಗಿತ್ತು. ಅಧಿಕಾರಿಗಳು ಕಚೇರಿಗೆ ತಂದು ಜೋಡಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದೆ.

Exit mobile version