Site icon Kannada News-suddikshana

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಎಂಟ್ರಿ

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸೀಸನ್‌ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು.

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಈಗಾಗಲೇ ಯುವರಾಜ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದೆ. ಈ ವೇಳೆ ಯುವರಾಜ್ ಕಡೆಯಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ‌ಆದುದರಿಂದ ಮುಂಬರುವ ಐಪಿಎಲ್​ನಲ್ಲಿ ಯುವರಾಜ್ ಸಿಂಗ್ ಡಿಸಿ ತಂಡದ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Exit mobile version