ದಾವಣಗೆರೆ: ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಪಿಯುಸಿ ಪರೀಕ್ಷೆಯು ಜಿಲ್ಲೆಯ 31 ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆದಿದೆ. ಇಂದು ಕನ್ನಡ ಭಾಷೆ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿವೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವಾದ ಗುರುವಾರ ನಗರದ ಸೀತಮ್ಮ ಕಾಲೇಜು, ದ್ವಿತೀಯ ಪಿ ಯು ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ಪರಿಶೀಲಿಸಿದರು.
ಕನ್ನಡ ವಿಷಯಕ್ಕೆ ಒಟ್ಟು 16178 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು, ಈ ಪೈಕಿ 15,465 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 713 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸಂಸ್ಕøತ ವಿಷಯದಲ್ಲಿ 7,151 ವಿದ್ಯಾರ್ಥಿಗಳಲ್ಲಿ 6,723 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 428 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅರೇಬಿಕ್ ವಿಷಯದಲ್ಲಿ ಯಾವುದೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದಿಲ್ಲ.
ಆಯ್ಕೆ ಸಭೆ: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಕೋರಿ 2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಮಾರ್ಚ್ 13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚೆನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಆಯ್ಕೆ ಸಭೆಯಲ್ಲಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.