ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಾಮಪತ್ರ ಸ್ವೀಕರಿಸಲು ಚುನಾವಣಾಧಿಕಾರಿಗಳ ಕಚೇರಿ ಸ್ಥಾಪನೆಗೆ ಡಿಸಿ ಸೂಚನೆ

On: March 9, 2023 12:16 PM
Follow Us:
---Advertisement---

ದಾವಣಗೆರೆ;ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರಗಳನ್ನು ಸ್ವೀಕರಿಸಲು ಚುನಾವಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.

103-ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಜಗಳೂರು ತಾಲ್ಲೂಕು ಕಚೇರಿ ಸಭಾಂಗಣ, ಜಗಳೂರು 105-ಹರಿಹರ  ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಹರಿಹರ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಕೊಠಡಿ, 106 ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಮಹಾನಗರ ಪಾಲಿಕೆ ಕಚೇರಿ ಒಂದನೇ ಮಹಡಿಯ ಕೊಠಡಿ ಸಂಖ್ಯೆ 10(ಮೇಯರ್ ರೂಂ), 107-ದಾವಣಗೆರೆ  ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಮಹಾನಗರ ಪಾಲಿಕೆ ಕಚೇರಿ ನೆಲ ಮಹಡಿಯ ಕೊಠಡಿ ಸಂಖ್ಯೆ 3 (ಆಯುಕ್ತರ ಕೊಠಡಿ), 108-ಮಾಯಕೊಂಡ  ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಜಿಲ್ಲಾ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಕೊಠಡಿ, 109-ಚನ್ನಗಿರಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಚನ್ನಗಿರಿ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಕೊಠಡಿ, ಹಾಗೂ 110-ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಗಳ ಕಚೇರಿಯಾಗಿ ಹೊನ್ನಾಳಿ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಕೊಠಡಿಗಳನ್ನು ಸ್ಥಾಪಿಸಲಾಗಿದೆ

ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಚುನಾವಣೆಗೆ ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಮಾಡಿ, ನಕ್ಷೆ ಸಹಿತ ಯೋಜನೆಯೊಂದಿಗೆ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು. ಅಲ್ಲದೇ ಕಚೇರಿಗಳ   ವಿವರವನ್ನು ಸ್ಥಳೀಯ ರಾಜಕೀಯ ಪಕ್ಷದ  ಹಾಗೂ ಸಾಂಭವ್ಯ ಅಭ್ಯರ್ಥಿಗಳ ಗಮನಕ್ಕೆ ತರಲು ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment