Site icon Kannada News-suddikshana

ಪದವೀಧರರಿಗೆ 3 ಸಾವಿರ, ಡಿಪ್ಲೊಮೋ ಪದವೀಧರರಿಗೆ 1500 ರೂ. ಯುವ ನಿಧಿ: ರಾಹುಲ್ ಗಾಂಧಿ ಘೋಷಣೆ RAHUL GANDHI BHARAVASE

SUDDIKSHANA KANANDA NEWS

DATE:20-03-2023

DAVANAGERE

 

ಬೆಳಗಾವಿ: ಕಾಂಗ್ರೆಸ್ ಪಕ್ಷ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದೊಂದೇ ಘೋಷಣೆ ಮಾಡಲಾರಂಭಿಸಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ಮನೆ ಮಾಲೀಕಳಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 200 ಯುನಿಟ್ (UNIT) ಉಚಿತ ವಿದ್ಯುತ್ (FREE CURRENT), 10 ಕೆಜಿ (K.G.)ಅಕ್ಕಿ ನೀಡುವ ಭರವಸೆ ನೀಡಿತ್ತು. ಆದ್ರೆ, ಇಂದು ರಾಹುಲ್ ಗಾಂಧಿ (RAHUL GANDHI) ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಹಾಗೂ ಡಿಪ್ಲೋಮೋ ಪದವೀಧರರಿಗೆ 1500 ರೂಪಾಯಿಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂಬ ಘೋಷಣೆ ಮಾಡಿದ್ದಾರೆ.

ಬೆಳಗಾವಿಯ ಸಿಪಿಇಡಿ (CPED) ಮೈದಾನದಲ್ಲಿ ಏರ್ಪಡಿಸಿದ್ದ ಯುವ ಕ್ರಾಂತಿ (YUVA KRANTHI) ರ್ಯಾಲಿಯಲ್ಲಿ ಮಾತನಾಡಿದ ಅವರು, ಯುವಶಕ್ತಿ ಸದೃಢವಾಗಿದ್ದರೆ, ರಾಜ್ಯ, ದೇಶ ಸದೃಢವಾಗಿರಲಿದೆ ಎಂಬ ನಂಬಿಕೆ ನಮ್ಮದು. ಈ ಹಿನ್ನೆಲೆಯಲ್ಲಿ ರಾಜ್ಯದ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆಯಾಗಿ ಪ್ರತಿ ತಿಂಗಳು ಪಧವೀಧರರಿಗೆ 3000 ರೂ ಹಾಗೂ ಡಿಪ್ಲೊಮಾ ಪಧವೀಧರರಿಗೆ ರೂ .1500 ನೀಡುವ ಯುವ ನಿಧಿ ಯೋಜನೆ ಜಾರಿಗೆ ತರಲಾಗುವುದು ಎಂಬ ಭರವಸೆ ನೀಡಿದರು.

ಯುವ ಸಬಲೀಕರಣದ ವಿಚಾರದಲ್ಲಿ ಕಾಂಗ್ರೆಸ್ (CONGRESS) ಪಕ್ಷದ ಬದ್ಧತೆ ಅಚಲವಾದುದು. ಜನರ ಹಿತ, ಯುವಕರ ಹಿತ, ಉದ್ಯೋಗ ಸೃಷ್ಟಿ ಸೇರಿದಂತೆ ಉತ್ತಮ ಆಡಳಿತ ನೀಡಲಾಗುವುದು ಎಂದು ಹೇಳಿದರು.

ಕರ್ನಾಟಕದಲ್ಲಿರುವುದು ಭ್ರಷ್ಟ ಸರ್ಕಾರ ಎಂದು ಇಡೀ ದೇಶವೇ ಮಾತನಾಡುತ್ತಿದೆ. ಶೇಕಡಾ 40 ರಷ್ಟು ಕಮೀಷನ್ ಎಲ್ಲದರಲ್ಲಿಯೂ ಪಡೆಯಲಾಗುತ್ತಿದೆ. ಈ ಸರ್ಕಾರ ನಡೆಯುತ್ತಿರುವುದು ಈ ಕಮೀಷನ್ ಹಣದಿಂದಲೇ. ಬಿಜೆಪಿ (BJP) ಶಾಸಕನ ಪುತ್ರನ ಮನೆಯಲ್ಲಿ ಆರು ಕೋಟಿ ರೂಪಾಯಿ ಪತ್ತೆಯಾಗಿದೆ. ಲೋಕಾಯುಕ್ತ ದಾಳಿ ವೇಳೆಯ ರೆಡ್ ಹ್ಯಾಂಡ್ ಆಗಿ ಹಣದ ಸಮೇತ ಬಿಜೆಪಿ ಶಾಸಕನ ಪುತ್ರ ಸಿಕ್ಕಿ ಹಾಕಿಕೊಂಡಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಗುತ್ತಿಗೆದಾರರ ಸಂಘವು ಶೇಕಡಾ 40 ರಷ್ಟು ಕಮೀಷನ್ ಕೇಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ (NARENDRA MODI)  ಅವರಿಗೆ ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ. ಪಿಎಸ್ ಐ ನೇಮಕಾತಿ ಸೇರಿದಂತೆ ಎಲ್ಲದರಲ್ಲಿಯೂ ಲಂಚ ಪಡೆಯುತ್ತಿರುವ ಬಿಜೆಪಿ ಕಿತ್ತೊಗೆಯಿರಿ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ (D. K. SHIVAKUMAR) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭ್ರಷ್ಟ ಬಿಜೆಪಿ ಕಿತ್ತೊಗೆದು ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 140 ಸ್ಥಾನಗಳಲ್ಲಿ ಗೆದ್ದು ಬೆಂಗಳೂರಿನ ವಿಧಾನಸೌಧದಲ್ಲಿ ಆಡಳಿತ ನಡೆಸುತ್ತದೆ ಎಂದು ಹೇಳಿದರು.

Exit mobile version