SUDDIKSHANA KANNADA NEWS/ DAVANAGERE/ DATE_05-07_2025
ದಾವಣಗೆರೆ: ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣವನ್ನು ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ಶಾಲಾ, ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುವ ಯೋಜನೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್:dom.karnataka.gov.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ದೂ.ಸಂ: 9900667916, 9945366062, 9113512565, 96113512565 ಮತ್ತು ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ದೂ. ಸಂ: 08192-250022, 250066 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.