SUDDIKSHANA KANNADA NEWS/ DAVANAGERE/ DATE:01-03-2024
SUDDIKSHANA KANNADA NEWS/ DAVANAGERE/ DATE:01-03-2024
ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ 2025 ರವರೆಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಯ ಇಲಾಖಾ ವೆಬ್ಸೈಟ್ ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 8296358345,6362912714 ನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.