SUDDIKSHANA KANNADA NEWS/ DAVANAGERE/ DATE-04-06-2025
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಮೃತಪಟ್ಟ ಎಲ್ಲರಿಗೂ ಅವರ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. 33 ಮಂದಿ ಗಾಯಗೊಂಡಿದ್ದು, ಎಲ್ಲರ
ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿದರು. ಒಟ್ಟು 47 ಮಂದಿ ಗಾಯಗೊಂಡಿದ್ದು, ಕೆಲವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಾನು ಮೃತರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಗಂಡು ಮಕ್ಕಳು, ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ಕುಟುಂಬದ ವಾರಸುದಾರರಿಗೆ ಸರ್ಕಾರ ಹತ್ತು ಲಕ್ಷ ರೂಪಾಯಿ ಪರಿಹಾರವಾಗಿ ನೀಡುತ್ತದೆ ಎಂದು ಹೇಳಿದರು.
ಗಾಯಗೊಂಡಿರುವ 33 ಮಂದಿಯೂ ಪ್ರಾಣಾಪಾಯಿಂದ ಪಾರಾಗಿದ್ದಾರೆ. ಯಾವುದೇ ತೊಂದರೆ ಇಲ್ಲ. ಚಿಕಿತ್ಸೆ ನೀಡಲಾಗುತ್ತಿದೆ. ನಾನು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.