SUDDIKSHANA KANNADA NEWS/ DAVANAGERE/ DATE:06-02-2025
ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕಲ್ಪತರು ಪ್ರಾಜೆಕ್ಟ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ಪೂಲ್ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಅಂತಿಮ ವರ್ಷದ 15 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ವಿವೇಕಾನಂದ ಆರ್., ಲಕ್ಷ್ಮಿ ಎನ್ ಎಸ್, ಮಾರುತಿ ಮಣಿ ರೆಡ್ಡಿ, ಗಣೇಶ್ ಡಿ.ಎಚ್, ಸಂಜನಾ ವಿ, ಉಮೇಶ್ ವಿ, ದರ್ಶನ್ ಎಸ್, ಫಿರೋಜ್ ಟಿಎಸ್, ಸಜಿತ್ ದೊರೈ, ಶಶಾಂಕ್ ಕೆಆರ್, ಮಲ್ಲಿಕ್ ರಿಹಾನ, ಉಮೈದ್ ಖಾನ್, ಅಭಿಷೇಕ್ ಆರ್, ಕಿರಣ್ ಕುಮಾರ್ ಎಸ್, ಕಿರಣ್ ಕುಮಾರ್ ಎಂ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ ಸೇರಿದಂತೆ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ನಿಂಗರಾಜು, ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸಿನ್ ಬೇಗಮ್, ಸುನೀಲ್ ಕುಮಾರ್ ಸೇರಿದಂತೆ ಇತರರು ಇದ್ದರು.