SUDDIKSHANA KANNADA NEWS/ DAVANAGERE/ DATE:24-02-2024
ಕಾಸ್ ಗಂಜ್: ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ.
ಕಾಸ್ ಗಂಜ್ ನಲ್ಲಿ ಟ್ರ್ಯಾಕ್ಟ್ ಟ್ರಾಲಿ ಹೊಂಡಕ್ಕೆ ಬಿದ್ದ ಪರಿಣಾಮ ಹದಿನೈದು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ತುರ್ತು ಪರಿಹಾರ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಪೂರ್ಣಿಮಾ ಹಬ್ಬದ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ಮಹಿಳೆಯರು ಮತ್ತು ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯು ಕೊಳದಲ್ಲಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿರುವ ಸಿಎಂ, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.