ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮುಸ್ಲಿಂರಿಗೆ ಶೇಕಡಾ 15ರಷ್ಟು ವಸತಿ ಯೋಜನೆಯಲ್ಲಿ ಮೀಸಲಾತಿ: ಏನೆಲ್ಲಾ ಸ್ಪಷ್ಟನೆ ಕೊಟ್ರು ಸಿಎಂ ಸಿದ್ದರಾಮಯ್ಯ?

On: June 20, 2025 9:46 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-20-06-2025

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ ಎಂದು ಸಿಎಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ 15% ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ. ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು 10% ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ 10% ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ 15% ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ ಎಂದಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment