ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಓದುವವರಿಗೆ ಗುಡ್ ನ್ಯೂಸ್: 1.99 ಕೋಟಿ ರೂ. ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ

On: February 18, 2025 9:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-02-2025

ದಾವಣಗೆರೆ: ಬರುವ ಆರ್ಥಿಕ ವರ್ಷಕ್ಕೆ ನಗರ ಗ್ರಂಥಾಲಯ ಪ್ರಾಧಿಕಾರಕ್ಕೆ ರೂ.1,99,80000 ಗಳ ಬಜೆಟ್ ನೀಡಿ ಮಹಾಪೌರರು ಹಾಗೂ ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ಕೆ. ಚಮನ್‍ಸಾಬ್ ಅನುಮೋದನೆ ನೀಡಿದ್ದಾರೆ ಎಂದು ನಗರ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಆಯವ್ಯಯ ಸಭೆಯಲ್ಲಿ ಬಜೆಟ್‍ಗೆ ಅನುಮೋದನೆ ನೀಡಲಾಯಿತು. ದೇವರಾಜ ಅರಸ್ ಬಡಾವಣೆ ಗ್ರಂಥಾಲಯದ ವಿಸ್ತರಣೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ನಿರ್ವಹಿಸಲು ಅನುಮೋದನೆ ನೀಡಿದರು.

ಬಡಾವಣೆ ಪೊಲೀಸ್ ಠಾಣೆ ಎದುರಿಗಿರುವ ಸಿಲ್ವರ್ ಜ್ಯುಬಿಲಿ ಶಾಖಾ ಗ್ರಂಥಾಲಯಕ್ಕೆ ಓದುಗರ ಅನುಕೂಲಕ್ಕೆ ಬೋರ್ ವೆಲ್ ಕೊರೆಸಲು ಅನುಮೋದನೆ ನೀಡಿದ್ದಲ್ಲದೇ ಸ್ಥಳದಲ್ಲಿಯೇ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ ಎಸ್., ದ.ರಾ.ಮ ವಿಜ್ಞಾನ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಗೋವಿಂದರಾಜು ಎಲ್, ರಾಜನಹಳ್ಳಿ ಸೀತಮ್ಮ ಬಾಲಕೀಯರ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಮಂಜಪ್ಪ ಎ.ಆರ್ ಹಾಗೂ ಗ್ರಂಥಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment