ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಒಂದಾಗೋಣ ಬಾ: ನಾನೊಂದು ತೀರ ನೀನೊಂದು ತೀರ ಆಗಿ ವಿಚ್ಛೇದನ ಕೋರಿದ್ದ 23 ಜೋಡಿ ಮತ್ತೆ ವೈವಾಹಿಕ ಜೀವನಕೆ…!

On: July 12, 2025 8:20 PM
Follow Us:
ವಿಚ್ಛೇದನ
---Advertisement---

SUDDIKSHANA KANNADA NEWS/ DAVANAGERE/ DATE_12-07_2025

ದಾವಣಗೆರೆ: ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 23 ಜೋಡಿಗಳು ವಿಚ್ಛೇದನ ಅರ್ಜಿ ಸಲ್ಲಿಸಿದ್ದು ಪ್ರಕರಣ ಸುಖಾಂತ್ಯಗೊಂಡಿದೆ.

ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಮಧ್ಯ ಪ್ರವೇಶದಿಂದ ಜೋಡಿಗಳು ಮತ್ತೆ ಒಂದಾಗಿವೆ. ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಈ ಮೂಲಕ ಬೇರ್ಪಟ್ಟ ಜೋಡಿಗಳು ಮುಂದೆ ಪ್ರೀತಿಯಿಂದ ಜೀವನ ಸಾಗಿಸುವುದಾಗಿ ಪ್ರತಿಜ್ಞೆ ಮಾಡಿವೆ.

READ ALSO THIS STORY: ದಾವಣಗೆರೆಯ ಹುಣಸೇಕಟ್ಟೆ ಹೆದ್ದಾರಿಯಲ್ಲಿ ಧಗಧಗನೇ ಹೊತ್ತಿ ಉರಿಯಿತು ಕಾರು: ನಾಲ್ವರು ಗ್ರೇಟ್ ಎಸ್ಕೇಪ್

ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಈ ವಿಷಯ ತಿಳಿಸಿದ್ದಾರೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment