SUDDIKSHANA KANNADA NEWS/ DAVANAGERE/ DATE-20-05-2025
ನವದೆಹಲಿ: ನ್ಯಾಯಾಂಗ ಸೇವೆಗೆ ಅರ್ಹರಾಗಲು ಮೂರು ವರ್ಷಗಳ ವಕೀಲಿ ವೃತ್ತಿ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಾಂಗ ಸೇವೆಗೆ ಅರ್ಹರಾಗಲು ಈ ಹಿಂದೆ ಇದ್ದ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಮೂರು ವರ್ಷಗಳ ವಕೀಲಿ ವೃತ್ತಿ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಕೆಳ ನ್ಯಾಯಾಲಯದ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆಯಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ವಕೀಲರ ಅನುಭವವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.