Site icon Kannada News-suddikshana

3000 ಪವರ್ ಮ್ಯಾನ್ ನೇಮಕ: ಕೆ. ಜೆ. ಜಾರ್ಜ್ ಮಾಹಿತಿ

SUDDIKSHANA KANNADA NEWS/ DAVANAGERE/ DATE:18-02-2025

ದಾವಣಗೆರೆ: ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇನ್ನಷ್ಟು ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಇದರಲ್ಲಿ 1;5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಿ ಅಂತಿಮವಾಗಿ ಅತ್ಯಂತ ಪಾರದರ್ಶಕವಾಗಿ ಮೀಸಲಾತಿ ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕಾತಿ ನಡೆಯಲಿದೆ. ಆದರೆ ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ, ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದರು.

Exit mobile version