Site icon Kannada News-suddikshana

ಶಾಮನೂರು ಶಿವಶಂಕರಪ್ಪರ ಸಂಪರ್ಕಿಸಿ ರಾಜ್ಯ ಸರ್ಕಾರ ಪತನಕ್ಕೆ ಶಾಸಕರಿಗೆ 50 ಕೋಟಿ ಆಮಿಷ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೊಸ ಬಾಂಬ್..!

SUDDIKSHANA KANNADA NEWS/ DAVANAGERE/ DATE:11-03-2024

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ಸಂಪರ್ಕಿಸಿ ರಾಜ್ಯ ಸರ್ಕಾರ ಬೀಳಿಸಲು ಬಿಜೆಪಿ ನಾಯಕರು ಸಂಚು ರೂಪಿಸಿದ್ದರು. ಮಾತ್ರವಲ್ಲ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಈ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸರ್ಕಾರ ಬೀಳಿಸಲು ಬಿಜೆಪಿಯವರು ಬಿಲ್ಲು ಬಾಣ ತೆಗೆದುಕೊಂಡಿದ್ದರು ಎಂದು
ವಾಗ್ದಾಳಿ ನಡೆಸಿದ್ದಾರೆ.

ಮೂವರು ಪಕ್ಷೇತರರು ಸೇರಿದಂತೆ ಸರ್ಕಾರಕ್ಕೆ 138 ಶಾಸಕರನ್ನು ಹೊಂದಿದ್ದೇವೆ. ಹಾಗಾಗಿ ನಮ್ಮ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮೂವರು ಪಕ್ಷೇತರ ಶಾಸಕರೂ ನಮ್ಮ ಜೊತೆಗಿದ್ದಾರೆ. ಸರ್ಕಾರ ಬೀಳಿಸುವ ವಿಚಾರದಲ್ಲಿ ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂದು ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

Exit mobile version