ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಂಚಾರಿ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ ಟ್ರಾಫಿಕ್ ಚಲನ್‍ನಲ್ಲಿ ಶೇ.50 ರಷ್ಟು ರಿಯಾಯಿತಿ: ಇಂದು ಕೊನೆ ದಿನ

On: September 12, 2025 10:03 PM
Follow Us:
ಸಂಚಾರಿ
---Advertisement---

SUDDIKSHANA KANNADA NEWS/ DAVANAGERE/DATE:13_09_2025

ದಾವಣಗೆರೆ: ಸೆ.13ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಾದಾಲತ್ ಜರುಗಲಿದ್ದು, ಸಾರ್ವಜನಿಕರಿಗೆ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು.

READ ALSO THIS STORY: ಭದ್ರಾ ನಾಲೆಗಳ ದುರಸ್ತಿಗೆ ಅನುದಾನ ನೀಡಿ ರೈತರ ಹಿತ ಕಾಪಾಡಿ: ಡಿಸಿಎಂಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

ಸಂಚಾರಿ ನಿಯಮಗಳ ಉಲ್ಲಂಘನೆ ದಂಡ ಮೊತ್ತ ಪಾವತಿಸಲು ಶೇ 50% ರಿಯಾಯಿತಿ ಸೆಪ್ಟೆಂಬರ್ 13 ರಂದು ಅಂತ್ಯಗೊಳ್ಳಲಿದೆ. ಇದರ ಸದುಪಯೋಗ ಮಾಡಿಕೊಳ್ಳಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ್ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ್ಯಾಲಿ:

ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನನ್ನ ಮತ, ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಆಚರಿಸುವ ಸಂಬಂಧ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 7 ಗಂಟೆಗೆ ವಿದ್ಯಾನಗರದಲ್ಲಿನ ದೃಶ್ಯಕಲಾ ಕಾಲೇಜಿನಿಂದ ಸೈಕಲ್ ರ್ಯಾಲಿ ಆರಂಭವಾಗಿ 10 ಕಿ.ಮೀ ಸಾಗಿದ ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಲಿದೆ.

ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಗಳ ಜೊತೆ ಸೈಕಲ್‍ನೊಂದಿಗೆ ರ್ಯಾಲಿಯಲ್ಲಿ ಭಾಗವಹಿಸಿ, ನಂತರ 11 ಗಂಟೆಗೆ ತುಂಗಭದ್ರಾ ಸಭಾಂಗಣದಲ್ಲಿ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment