SUDDIKSHANA KANNADA NEWS/ DAVANAGERE/ DATE:03-01-2025
ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದ ಆವರಣದಲ್ಲಿ ಜ.5ರಂದು ಕುರುಬ ಸಮಾಜ ಹಾಗೂ ಸಿದ್ದರಾಮಯ್ಯ ಬಳಗದಿಂದ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ 537ನೇ ಶ್ರೀ ಕನಕದಾಸರ ಜಯಂತ್ಯುತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಹರಿಹರ ಮಾಜಿ ಶಾಸಕ ಎಸ್. ರಾಮಪ್ಪ ತಿಳಿಸಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕನಕದಾಸರ ಪುತ್ಥಳಿ ಅನಾವರಣಗೊಳಿಸುವರು. ವಿಶೇಷ ಆಹ್ವಾನಿತರಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ, ನಗರಾಭಿವೃದ್ಧಿ ಸಚಿವ ಬಿ.ಎಸ್. ಭೈರತಿ ಸುರೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ವಸತಿ ಸಚಿವ ಜಮೀರ್ ಆಹಮದ್ ಖಾನ್ ಮತ್ತಿತರರು ಆಗಮಿಸುವರು ಎಂದರು.
ಸಾನ್ನಿಧ್ಯವನ್ನು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ, ಈಶ್ವರಾನಂದಪುರಿ ಶ್ರೀ, ಸಿದ್ದರಾಮನಂದಪುರಿ ಶ್ರೀ, ಶಿವಾನಂದಪುರಿ ಶ್ರೀ, ಮುರುಳೀಧರ ಶ್ರೀ, ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀ, ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ, ಚಿನ್ಮೂಲಾದ್ರಿ ಶಿಲಾಪುರಿ ಸಂಸ್ಥಾನದ ಪುರುಷೋತ್ತಮಾನಂದಪುರಿ ಶ್ರೀ ಆಗಮಿಸುವರೆಂದರು.
ಕಾರ್ಯಕ್ರಮದ ನಿಮಿತ್ತ ಜ.4ರಂದು ಬೆಳಗ್ಗೆ 9.30ಕ್ಕೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಕಾಳಿದಾಸ ವೃತ್ತದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಜ.5ರ ಬೆಳಗ್ಗೆ ದುರ್ಗಾಂಬಿಕಾ ದೇವಸ್ಥಾನದಿಂದ ಹೈಸ್ಕೂಲ್ ಮೈದಾನದವರೆಗೆ ಹಮ್ಮಿಕೊಂಡಿರುವ
ಮೆರವಣಿಗೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಎಸ್ಪಿ ಉಮಾಪ್ರಶಾಂತ್ ಮತ್ತಿತರರು ಪಾಲ್ಗೊಳ್ಳುವರು ಎಂದು ವಿವರಿಸಿದರು.
ಭೋವಿ ಸಮಾಜದ ಮುಖಂಡ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ಶೋಷಿತ ಸಮುದಾಯಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕವಾಗಿ ಬಲತುಂಬುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಆದ್ದರಿಂದ ಎಲ್ಲ ಶೋಷಿತ
ಸಮುದಾಯದವರು ಕಾರ್ಯಕ್ರಮಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಲ ತುಂಬೋಣ ಎಂದು ಕರೆನೀಡಿದರು.
ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಕಾರ್ಯಕ್ರಮದಲ್ಲಿ 40 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸುಮಾರು 30 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಮಾಜಿ ಮೇಯರ್ ಗೋಣೆಪ್ಪ, ಮುಖಂಡರಾದ ಜೆ.ಎನ್. ಶ್ರೀನಿವಾಸ್, ಬಿ. ವೀರಣ್ಣ, ಹಾಲೇಕಲ್ ಅರವಿಂದ, ರೇವಣಸಿದ್ದಪ್ಪ, ಇಟ್ಟಿಗುಡಿ ಮಂಜುನಾಥ್, ಜೆ.ಎಸ್. ಶಿವಣ್ಣ, ಹಾಲೇಶಪ್ಪ, ಬಿ. ಲಿಂಗರಾಜು, ದಾದುಶೇಟ್, ವನಜಾ, ಸಿದ್ದಣ್ಣ,
ನಾಗೇಂದ್ರಾಚಾರ್, ಹಾಲೇಶಪ್ಪ . ಕುರುಬರ ಕೆರಿ. ಜಯಣ್ಣ. ವನಜ ಕರಿಯಪ್ಪ. ರಂಗಸ್ವಾಮಿ. ಡಿ.ಜಿ ಪ್ರಕಾಶ್. ಪ್ರಕಾಶ್. ಎಂ ಸಿ ರಮೇಶ್ ಮರಿಯೋಜಿ ರಾವ್ ಪುರಂದರ ಲೋಕಿಕ್ಕೆರೆ. ಚೆನ್ನವೀರಯ್ಯ. ಕನ್ನಾವರ ರವಿ. ಪರಶುರಾಮ್. ಮತ್ತಿತರರಿದ್ದರು.