ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಆರು ಜಿಲ್ಲೆಗಳ ತೋಟಗಾರಿಕೆ ಬೆಳೆಗಾರರ ಅನುಕೂಲಕ್ಕೆಗಿ 14000 ಟನ್ ಸಾಮರ್ಥ್ಯದ 6 ಶೀತಲ ಘಟಕಗಳು: ಎಸ್. ಎಸ್ ಮಲ್ಲಿಕಾರ್ಜುನ್

On: May 6, 2025 5:17 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-06-05-2025

ದಾವಣಗೆರೆ: ರಾಜ್ಯದ ತೋಟಗಾರಿಕಾ ಕ್ಷೇತ್ರ ಹಾಗೂ ವಲಯಗಳ ಅಭಿವೃದ್ಧಿಗೆ ಪಣತೊಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ನಗರದ ಗೃಹ ಕಚೇರಿಯಲ್ಲಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವೇಳೆ ಈ ಮಾಹಿತಿ ನೀಡಿದರು.

ಸಚಿವ ಸಂಪುಟದ ನಿರ್ಣಯಗಳ ಮೇಲೆ ತೋಟಗಾರಿಕಾ ವಲಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪುಗೊಳಿಸಲಾಗಿದೆ ಎಂದು ತಿಳಿಸಿದರು.

ಆರ್ ಐ ಡಿಎಫ್ 29ನೇ ಟ್ರಾಂಚೆರಡಿ ಹಾವೇರಿ, ಕೋಲಾರ, ಮಂಡ್ಯ ಶಿವಮೊಗ್ಗ, ವಿಜಯಪುರ ಮತ್ತು ಹಾಸನ 6 ಜಿಲ್ಲೆಗಳಲ್ಲಿ ತೋಟಗಾರಿಕೆ ಬೆಳೆಗಾರರಿಗೆ ಅನುಕೂಲವಾಗುವಂತೆ 14000 ಟನ್ ಸಾಮರ್ಥ್ಯದ 6 ಶೀತಲ ಘಟಕಗಳ ನಿರ್ಮಾಣವನ್ನು ರೂ.65.97 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಆರ್ ಐ ಡಿಎಫ್ 29ನೇ ಟ್ರಾಂಚೆರಡಿ ಚಿತ್ರದುರ್ಗ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ 3 ತೋಟಗಾರಿಕೆ ತರಬೇತಿ ಕೇಂದ್ರಗಳು ಮತ್ತು ಬೆಳಗಾವಿ ಜಿಲ್ಲೆಯ ಅರಬಾವಿಯಲ್ಲಿ 1 ವಿದ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಒಟ್ಟು ರೂ.35.14 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ವಿಜಯಪುರ ಜಿಲ್ಲೆಯ ಅಲಮೇಲದಲ್ಲಿ ತೋಟಗಾರಿಕೆ ಕಾಲೇಜು ನಿರ್ಮಾಣಕ್ಕೆ ರೂ.39.95 ಕೋಟಿಗಳ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, 25 ವಿದ್ಯಾರ್ಥಿಗಳಿಗೆ ಬಾಗಲಕೋಟಿ ಕ್ಯಾಂಪಸ್‌ನಲ್ಲಿ ಪ್ರವೇಶ ನೀಡಲಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾರ್ಬನ್ ಕ್ರೆಡಿಟ್ ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು 3 ಕಾರ್ಬನ್ ಕ್ರೆಡಿಟ್ ಫ್ರೇಮ್ ವರ್ಕ್ ಯೋಜನೆಯನ್ನು ತೋಟಗಾರಿಕೆ ಇಲಾಖೆಯ ಪ್ರಥಮ ಬಾರಿಗೆ ರಾಜ್ಯದ ರೈತರಿಗೆ ಪರಿಚಯಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪುಷ್ಪ ಕೃಷಿಯನ್ನು ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು ಸಂಸ್ಥೆಗೆ ಹೆಬ್ಬಾಳದಲ್ಲಿ ಬಾಡಿಗೆ ರಹಿತ ಆಧಾರದ ಮೇಲೆ ಜಮೀನು ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ನಂದಿ ಬೆಟ್ಟದಲ್ಲಿ ರೋಪ್‌ವೇ ನಿರ್ಮಿಸುವ ಸಲುವಾಗಿ ತೋಟಗಾರಿಕೆ ಇಲಾಖೆಯ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿಯನ್ನು ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment