ಚಿಕ್ಕಮಗಳೂರು: ನಾಳೆ ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರು ನಾಳೆ ಶರಣಾಗುವ ಸಾಧ್ಯತೆ ಇದ್ದು, ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ನಾಳೆ 6 ನಕ್ಸಲರು ಶರಣಾಗತಿ ಆದ್ರೆ ಕರ್ನಾಟಕ ನಕ್ಸಲ್ ಮುಕ್ತ ಆಗುತ್ತೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ನಾಳೆ 6 ಮಂದಿ ನಕ್ಸಲರು ಶರಣಾಗೋದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
- 1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
2. ವನಜಾಕ್ಷಿ (ಬಾಳೆಹೊಳೆ ಕಳಸ)
3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
4. ಮಾರಪ್ಪ ಅರೋಳಿ (ಕರ್ನಾಟಕ)
5. ವಸಂತ ಟಿ (ತಮಿಳುನಾಡು)
6. ಎನ್. ಜೀಶಾ (ಕೇರಳ)
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆ್ಯಕ್ಟಿವ್ ಆಗಿದ್ದ ನಕ್ಸಲರನ್ನ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ ಸಭೆ ನಡೆಸಿದ್ದಾರೆ.
6 ಮಂದಿ ನಕ್ಸಲರು ಈಗಾಗಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ಶರಣಾಗತಿ ಪತ್ರ ನೀಡಿದ್ದಾರೆ. ನಾಳೆ ಬೆಳಗ್ಗೆ 8ರಿಂದ 9ಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಕರ್ನಾಟಕ ಸೇರಿ ಹೊರ ರಾಜ್ಯದ ಮೋಸ್ಟ್ ವಾಂಟೆಡ್ ನಕ್ಸಲರು ನಾಳೆ ಶರಣಾಗುತ್ತಿದ್ದಾರೆ ಎನ್ನಲಾಗಿದೆ.