SUDDIKSHANA KANNADA NEWS/ DAVANAGERE/ DATE:15-03-2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ಆರೋಪವನ್ನು ಸ್ವತಃ ಕಾಂಗ್ರೆಸ್ ಶಾಸಕರೇ ಬಹಿರಂಗಗೊಳಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ರಾಜ್ಯ ಸರ್ಕಾರವು ಕಮಿಷನ್ ಬಾಕರಿಂದ ತುಂಬಿ ತುಳುಕುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕವು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಆರೋಪಿಸಿದೆ.
ಎಲ್ಲಾ ಯೋಜನೆ, ಕಾಮಗಾರಿಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜಾರೋಷವಾಗಿ 60% ಭ್ರಷ್ಟಾಚಾರ ನಡೆಯುತ್ತಿದೆ. ಜಲಜೀವನ್ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳೆಲ್ಲವೂ ಕಳಪೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಾಖಲೆ ಸಹಿತ ಬಹಿರಂಗಪಡಿಸಿದ್ದಾರೆ. ಕಾಮಗಾರಿಗಳಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು 60% ಕಮಿಷನ್ ನುಂಗಿದರೆ ಕಾಮಗಾರಿಗಳು ಕಳಪೆಯಾಗದಿರುತ್ತದೆಯೇ? ಎಂದು ಪ್ರಶ್ನಿಸಿದೆ.