Site icon Kannada News-suddikshana

ರೈತರ ಹಾಲಿನ ಪ್ರೋತ್ಸಾಹ ಧನ 656 ಕೋಟಿ ಬಾಕಿ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

SUDDIKSHANA KANNADA NEWS/ DAVANAGERE/ DATE:05-04-2025

ಬೆಂಗಳೂರು: ನಾವು ಕೃಷಿಕರ ಪರ, ರೈತಪರ ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದು ಎರಡು ವರ್ಷಗಳೇ ಆಗಿದೆ. ಇನ್ನು ಪ್ರಚಾರ ಜಾಸ್ತಿ, ಕೆಲಸ ಕಮ್ಮಿ. ಇದು ಸರ್ಕಾರದ ನೀತಿ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಆರು ತಿಂಗಳಿಂದ ರಾಜ್ಯದ ರೈತರ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಬರೋಬ್ಬರಿ ₹656 ಕೋಟಿ ರೂ ಹಣವನ್ನು ಬಾಕಿ ಉಳಿಸಿಕೊಂಡಿರುವುದು ರೈತರ ಬಗೆಗೆ ಈ ಸರ್ಕಾರಕ್ಕಿರುವ ಅಸಡ್ಡೆತನವನ್ನು ಸಾಕ್ಷೀಕರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಲಿನ ದರವನ್ನು ನಾಲ್ಕೈದು ಬಾರಿ ಏರಿಕೆ ಮಾಡಿದರೂ ರೈತರಿಗೆ ಮಾತ್ರ ಪ್ರೋತ್ಸಾಹ ಧನವನ್ನು ಇನ್ನು ನೀಡಿಲ್ಲ.ನಿಮ್ಮ ಬಣ್ಣ ಬಣ್ಣದ ಮಾತುಗಳಿಂದ ಅನ್ನದಾತರಿಗೆ ಯಾವುದೇ ಉಪಯೋಗವಿಲ್ಲ. ಕೂಡಲೇ ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ್ನು ಬಿಡುಗಡೆ ಮಾಡಿ. ಬೆಲೆ ಏರಿಕೆಯ ಬಾಣವನ್ನು ಬಿಟ್ಟು ರೈತರ ಬದುಕನ್ನ ಕಸಿಯಬೇಡಿ ಎಂದು ಒತ್ತಾಯಿಸಿದ್ದಾರೆ.

Exit mobile version