ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಸ್. ಎಸ್. ಬಗ್ಗೆ ಬಿಜೆಪಿ ಅಭ್ಯರ್ಥಿಯ ಆಕ್ಷೇಪಾರ್ಹ ಮಾತಿನ ವಿಡಿಯೋ ವೈರಲ್

On: May 8, 2023 10:52 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-05-2023

ದಾವಣಗೆರೆ(DAVANAGERE): ದಾವಣಗೆರೆಯಲ್ಲಿ ಚುನಾವಣಾ ಕಣ ರಂಗೇರಿದೆ. ಆರೋಪ -ಪ್ರತ್ಯಾರೋಪ, ಟೀಕೆ – ಪ್ರತಿಟೀಕೆ ಸಾಮಾನ್ಯ. ಆದ್ರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಶಾಮನೂರು ಶಿವಶಂಕರಪ್ಪರ ಬಗ್ಗೆ ಬಿಜೆಪಿ ಅಭ್ಯರ್ಥಿ ಬಿ. ಜಿ. ಅಜಯ ಕುಮಾರ್ ಆಕ್ಷೇಪಾರ್ಹ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಶಿವಶಂಕರಪ್ಪರಿಗೆ ವಯಸ್ಸಾಗಿದೆ, ಈ ವಯಸ್ಸಿನಲ್ಲಿ ಬೇಕಾ? ಎಷ್ಟು ವರ್ಷ ಅಂತಾ ಅವರಿಗೆ ಅಧಿಕಾರ ಕೊಡೋದು ಎಂದು ವಿಡಿಯೋ(VEDEO)ದಲ್ಲಿ ಹೇಳಿರುವ ಅಜಯ ಕುಮಾರ್ ಅವರು, ಕೆಲ ಆಕ್ಷೇಪಾರ್ಹ ಪದಗಳ ಬಳಕೆ ಮಾಡಿದ್ದಾರೆ. ಇದು ಕಾಂಗ್ರೆಸ್ ಅನ್ನು ಕೆರಳುವಂತೆ ಮಾಡಿದೆ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತಮ್ಮ ವ್ಯಾಟ್ಸಪ್ ನ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದು, ಹಿರಿಯರ ಬಗ್ಗೆ ಈ ರೀತಿ ಬಿಜೆಪಿ (BJP)ಅಭ್ಯರ್ಥಿ ಮಾತನಾಡಬಾರದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಕಾಂಗ್ರೆಸ್ (CONGRESS) ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಹೇಳಿಕೆ ಅವರ ಸಂಸ್ಕೃತಿ ತೋರಿಸುತ್ತದೆ, ಮತದಾನ ಮಾಡುವ ಮುನ್ನ ಸಾವಿರ ಬಾರಿ ಯೋಚಿಸಿ ಎಂದು ಹೇಳಿದ್ದಾರೆ.

ಮೇ ಹತ್ತರಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ನಾಯಕರುಗಳು, ಚುನಾವಣಾ ಅಭ್ಯರ್ಥಿಗಳು ತಾವು ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಹಾಗೂ ಮುಂದೆ ಮಾಡಬಹುದಾದ ಕೆಲಸಗಳ ಬಗ್ಗೆ ಜನರಿಗೆ ಹೇಳುವ ಮೂಲಕ ತಮಗೆ ಯಾಕೆ ಮತದಾನ ಮಾಡಬೇಕು ಎಂದು ಮತದಾರರಿಗೆ ಮನವರಿಕೆ ಮಾಡುವುದು ಒಂದು ಉತ್ತಮ ನಡವಳಿಕೆಯನ್ನಬಹುದು. ಅಜಯ ಕುಮಾರ್ ತಮ್ಮ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಹಿರಿಯ ರಾಜಕಾರಣಿಗಳ ಬಗ್ಗೆ ಅವರು ಬಳಸಿರುವ ಪದಗಳು ಅವರ ಯೋಗ್ಯತೆ ಹಾಗೂ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಹಿರಿಯರ ಬಗ್ಗೆ ಬಳಸಿರುವ ಪದಗಳು ಅತ್ಯಂತ ಖಂಡನೀಯವಾಗಿದ್ದು ದುರಹಂಕಾರಕ್ಕೆ ಚುನಾವಣೆಯಲ್ಲಿ ಸೋಲಿಸುವ ಮೂಲಕವೇ ಜನರು ಉತ್ತರಿಸಬೇಕು ಎಂದು ಹೇಳಿದ್ದಾರೆ.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment