SUDDIKSHANA KANNADA NEWS/ DAVANAGERE/ DATE:27-02-2024
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿಯಡಿ ವಿದ್ಯಾರ್ಥಿವೇತನ ಪಡೆಯಲು ಆದಾಯ ಪ್ರಮಾಣ ಪತ್ರವನ್ನು ಆನ್ ಲೈನ್ ಮೂಲಕ ಫೆಬ್ರವರಿ 29 ರೊಳಾಗಾಗಿ ಸಲ್ಲಿಸಲು ಜಂಟಿ ಕೃಷಿ ನಿರ್ದೇಶಕರಾದ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ. (ಎಸ್ಎಸ್ಪಿ) ವಿದ್ಯಾರ್ಥಿಗಳ ಲಾಗಿನ್ನಲ್ಲಿ ಅವಕಾಶ ನೀಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.5ಲಕ್ಷ ಮೀರಿರಬಾರದು. ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಎಸ್.ಎಸ್.ಪಿ ವಿದ್ಯಾರ್ಥಿಗಳ ಲಾಗಿನ್ ನಲ್ಲಿ ಫೆ.29 ರೊಳಗೆ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದು ಅಪ್ಲೋಡ್ ಮಾಡಬಹುದೆಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಾಮನಿರ್ದೇಶನ ಮಾಡಲು ಆಹ್ವಾನ
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಸಮಾಜ ಸೇವಕರು ತಲಾ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಬ್ಬರು ಮಹಿಳಾ ಪ್ರತಿನಧಿಗಳು ಒಬ್ಬರು ಅಲ್ಪಸಂಖ್ಯಾತರ ಪ್ರತಿನಿ ಗುರುತಿಸಿ ನಾಮನಿರ್ದೇಶನ ಮಾಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಪ್ರಸ್ತಾವನೆಯನ್ನು ಮೇ 5 ರೊಳಗಾಗಿ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬಿಎಸ್ಎನ್ಎಲ್ ಕಟ್ಟಡ, ದೇವರಾಜ ಅರಸ್ ಬಡಾವಣೆ, ಹರಿಹರ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ತಿಳಿಸಿಲಾಗಿದೆ.