SUDDIKSHANA KANNADA NEWS/ DAVANAGERE/ DATE:27-02-2024
ದಾವಣಗೆರೆ: ಫೆ.29 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸುವರ್ಣ ಮಹೋತ್ಸವ ಮತ್ತು ಪಡಿತರ ವಿತರಕರ ರಾಜ್ಯ ಮಟ್ಟದ ಸಮಾವೇಶ ಕಾರ್ಯಕ್ರಮಗಳು ನಡೆಯುವ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಫೆಬ್ರವರಿ-2024 ರ ಮಾಹೆಯ ಪಡಿತರ ವಿತರಣೆಯನ್ನು ಫೆ.28 ರೊಳಗೆ ಪೂರ್ಣಗೊಳಿಸಬೇಕು.
ಫೆ.29 ರಂದು ಬಹುತೇಕ ನ್ಯಾಯಬೆಲೆ ಅಂಗಡಿಗಳ ಮಾಲಿಕರು ಹಾಗೂ ಪಡಿತರ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸುವ ಕಾರಣ, ಈ ತಿಂಗಳ ಕೊನೆಯ ದಿನಾಂಕದವರೆಗೆ ಕಾಯದೇ ಈವರೆಗೆ ಪಡಿತರ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಪಾಲಿನ ಪಡಿತರವನ್ನು ಪಡೆಯಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಾದ ಸಿದ್ದರಾಮ ಮರಿಹಾಳ್ ತಿಳಿಸಿದ್ದಾರೆ.