SUDDIKSHANA KANNADA NEWS/ DAVANAGERE/ DATE:04-03-2024
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಗ್ರಾಮದಲ್ಲಿ ಕಾಲೇಜಿನ ಆವರಣದಲ್ಲಿ ನಿಂತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಮುಖಕ್ಕೆ ಮಾಸ್ಕ್ ಧರಿಸಿ ಬಂದಿದ್ದ ಕಿರಾತಕ ಆಸಿಡ್ ಎರಚಿದ ಹೃದಯವಿದ್ರಾವಕ ಘಟನೆ ನಡೆದಿದೆ,
ಈ ದಾಳಿಯಿಂದಾಗಿ ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರವಾದ ಗಾಯಗಳಾಗಿದ್ದು, ಒಬ್ಬಾಕೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆಸಿಡ್ ಎರಚಿದ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದ. ಈಗ ಕಡಬ ಪೊಲೀಸರು ಅಬೀಬ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈತ ಕೇರಳ ಮೂಲದವನು ಎಂದು ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿನಿಯರು ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ಮುಖಕ್ಕೆ ಮಾಸ್ಕ್ ಧರಿಸಿದ್ದ ಯುವಕ ಏಕಾಏಕಿ ಮನಬಂದಂತೆ ಆಸಿಡ್ ಎರಚಿದ್ದಾನೆ. ವಿದ್ಯಾರ್ಥಿನಿಯರು ಜೋರಾಗಿ ಕೂಗಿಕೊಳ್ಳುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಿದ್ದ. ಪೊಲೀಸರು ಆತನನ್ನು ಈಗ ವಶಕ್ಕೆ ಪಡೆದಿದ್ದು, ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಆರೋಪಿ ಕೇರಳ ಮೂಲದ ವ್ಯಕ್ತಿ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಾಸ್ಕ್ ಮತ್ತು ಹ್ಯಾಟ್ ಹಾಕಿಕೊಂಡು ಬಂದಿದ್ದ ದುಷ್ಕರ್ಮಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು,
ಕೂಡಲೇ ಕಡಬ ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಈತ ಪರಿಚಯಸ್ಥನೇ ಆಗಿರಬೇಕು. ಇಲ್ಲವೇ ಒನ್ ವೇ ಲವ್ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ಲಭಿಸಿದ್ದು, ಪೊಲೀಸರು ಆರೋಪಿ ವಿಚಾರಣೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರಬರಲಿದೆ.