SUDDIKSHANA KANNADA NEWS/ DAVANAGERE/ DATE:06-03-2024
ದಾವಣಗೆರೆ: ಮಾರ್ಚ್ 17ರಿಂದ 20ರವರೆಗೆ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ಅದ್ಧೂರಿ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಜಾತ್ರಾ ವೇಳೆ ಜನಸಂದಣಿ ಹೆಚ್ಚಿರುವುದರಿಂದ ಜೇಬುಗಳ್ಳರು, ಸರಗಳ್ಳಲು ಹೆಚ್ಚಾಗುವ ಸಂದರ್ಭವಿರುತ್ತದೆ. ಎಲ್ಲಾ ಕಡೆ ಸಿಸಿ ಕ್ಯಾಮೆರಾ ಅಳವಡಿಕೆಯನ್ನು ದೇವಸ್ಥಾನ ಸಮಿತಿಯಿಂದ ಮಾಡಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
18 ಕಡೆ ಚೆಕ್ ಪೋಸ್ಟ್ಗಳ ನಿರ್ಮಾಣ ಮಾಡಲಾಗುತ್ತದೆ, ರಸ್ತೆ ಬದಿಯಲ್ಲಿ ಅಂಗಡಿ ಮುಂಗಟ್ಟುಗಳಿಗೆ ಅವಕಾಶ ಮಾಡಿಕೊಡದೆ ಸುಗಮ ಸಂಚಾರಕ್ಕಾಗಿ ಅನುಕೂಲ ಮಾಡಿಕೊಡಬೇಕು. ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹುಟ್ಟಿಸುವ ಪೋಸ್ಟ್ಗಳನ್ನು ಹಾಕಬಾರದು. ಜಾತ್ರಾ ವೇಳೆ ಜಗಳಗಳು ನಡೆಯದಂತೆ ದೇವಸ್ಥಾನ ಸಮಿತಿಯಿಂದ ಸ್ವಯಂ ಸೇವಕರನ್ನು ನೇಮಿಸುವ ಮೂಲಕ ಆಗಮಿಸುವ ಭಕ್ತರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವಂತೆ ನೋಡಿಕೊಂಡು ಅನಾವಶ್ಯಕವಾಗಿ ಪೊಲೀಸ್ ಭಾಗಿಯಾಗದಂತೆ ನೋಡಿಕೊಳ್ಳಬೇಕೆಂದರು.
ಫ್ಲೆಕ್ಸ್, ಬಂಟಿಂಗ್ಸ್ ಗೆ ಬೇಕು ಅನುಮತಿ: ಜಾತ್ರಾ ವೇಳೆ ಫ್ಲೆಕ್ಸ್, ಬಂಟಿಂಗ್ಸ್ ಹಾಕುವವರು ಪಾಲಿಕೆಯಿಂದ ಅನುಮತಿ ಪಡೆದುಕೊಂಡಿರಬೇಕು. ಅನುಮತಿ ಇಲ್ಲದೇ ಇರುವ ಫ್ಲೆಕ್ಸ್ ಗಳಿಗೆ ಅವಕಾಶ ಇರುವುದಿಲ್ಲ. ಪ್ಲಾಸ್ಟಿಕ್ ಬಳಕೆಯನ್ನು ಮಿತಿಗೊಳಿಸಿ ಪರಿಸರ ಸ್ನೇಹಿ ಜಾತ್ರೆ ಆಚರಣೆಗೆ ಮುಂದಾಗಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದ್ದು ಇದನ್ನು ಪಾಲನೆ ಮಾಡಬೇಕಾಗುತ್ತದೆ. ಜಾತ್ರಾ ಸಂದರ್ಭದಲ್ಲಿ ಎಲ್ಲ ವ್ಯವಸ್ಥೆಗಳ ನಿರ್ವಹಣೆಗಾಗಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದರು.
ಟ್ರಸ್ಟ್ ಸದಸ್ಯರಾದ ಚನ್ನಬಸಪ್ಪನವರು ಎಲ್ಲರ ಸಹಕಾರದಿಂದ ಜಾತ್ರೆಯನ್ನು ಸುಗಮವಾಗಿ ನಡೆಸಿಕೊಂಡು ಹೋಗೋಣ ಎಂದರು.
ಸಭೆಯಲ್ಲಿ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಪಾಲಿಕೆ ಮೇಯರ್ ವಿನಾಯಕ್ ಬಿ.ಹೆಚ್, ಟ್ರಸ್ಟ್ ಸದಸ್ಯ ವೀರಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್, ಪಾಲಿಕೆ ಆಯುಕ್ತರಾದ ರೇಣುಕಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಡಾ; ಅಶ್ವಥ್ ಎಂ.ಬಿ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.