ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನ, 5 ಲಕ್ಷ ರೂ. ಸಹಾಯಧನ

On: March 7, 2024 8:13 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2024

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಯುವಕ, ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷಗಳ ಸಹಾಯಧನವನ್ನು ಪಡೆಯಬಹುದು. ಅರ್ಜಿಗಳನ್ನು ಆಫ್‍ಲೈನ್ ಮೂಲಕ ಮಾ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ತರಬೇತಿಗೆ ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಗ್ಲಾಸ್‍ಹೌಸ್ ಹತ್ತಿರ ದೂ.ಸಂ.08192-233309 ಗೆ ಸಂರ್ಪಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಹಾವೀರ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment