ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾರ್ಚ್ ಮಾಹೆಯ ಪಡಿತರ ಧಾನ್ಯ ಹಂಚಿಕೆ: ಅಕ್ಕಿ ಬದಲು ಹಣ ಬಂದಿಲ್ಲವೇ…? ಹಾಗಿದ್ರೆ ಈ ಕೆಲಸ ಮಾಡಿ

On: March 7, 2024 11:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-03-2024

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ ಅಕ್ಕಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ
ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸಿದ್ದರಾಮ್ ಮಾರಿಹಾಳ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment