SUDDIKSHANA KANNADA NEWS/ DAVANAGERE/ DATE:12-03-2024
ದಾವಣಗೆರೆ: ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ 25 ವರ್ಷದ ಹಳೆಯ ಶ್ರೀ ರಾಜವೀರ ಮದಕರಿ ನಾಯಕರ ಮಹಾದ್ವಾರ ತೆರವುಗೊಳಿಸಿರುವುದು ಹಾಗೂ ವಾಲ್ಮೀಕಿ ಸಮಾಜದವರ ಬಂಧನ ಖಂಡಿಸಿ ಮಾ. 13ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ ನಡೆಸಲು ಜಿಲ್ಲಾ ವಾಲ್ಮೀಕಿ ಸಮಾಜದ ಮುಖಂಡರು ನಿರ್ಧರಿಸಿದರು.
ನಗರದ ಜಿಲ್ಲಾ ವಾಲ್ಮೀಕಿ ಸಮಾಜದ ಮುಖಂಡರು ದಾವಣಗೆರೆಯ ಪಿಜೆ ಬಡಾವಣೆಯ ನಾಯಕ ವಿದ್ಯಾರ್ಥಿ ನಿಲಯದಲ್ಲಿ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.

ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದಲ್ಲಿ 25 ವರ್ಷದ ಹಳೇಯ ಶ್ರೀ ರಾಜವೀರ ಮದಕರಿನಾಯಕರ ಮಹಾದ್ವಾರ ಇತ್ತು. ಆದ್ರೆ, ಜಿಲ್ಲಾಧಿಕಾರಿಗಳು ಯಾರ ಒತ್ತಡಕ್ಕೆ ಮಣಿದು ತೆರವುಗೊಳಿಸಿದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜಮವಾಗಿಲ್ಲ. ಮಹಾದ್ವಾರ ತೆರವುಗೊಳಿಸಿರುವುದನ್ನು ವಿರೋಧಿಸಿ ವಾಲ್ಮೀಕಿ ಸಮಾಜದ ಮುಖಂಡರು ಪ್ರತಿಭಟಿಸುವ ವೇಳೆ ಬಂಧಿಸಿ, ಪೊಲೀಸ್ ಠಾಣೆಗೆ ಕರೆದೊಯ್ದದ್ದು ಸರಿಯಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಈ ಕ್ರಮ ಖಂಡನೀಯ ಎಂದು ಸಭೆಯಲ್ಲಿ ಪಾಲ್ಗೊಂಡ ಮುಖಂಡರು ಅಭಿಪ್ರಾಯಪಟ್ಟರು.
ದಾವಣಗೆರೆ ಜಿಲ್ಲಾಡಳಿತ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿ ಮುತ್ತಿಗೆ ಹಾಕುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಅದ್ದರಿಂದ ದಾವಣಗೆರೆ ಜಿಲ್ಲೆಯ ವಾಲ್ಮೀಕಿ ಸಮಾಜದ ಬಂಧುಗಳು, ಯುವಕರು, ಮಹಿಳೆಯರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಿ. ವೀರಣ್ಣ, ಜಗಳೂರು ಮಾಜಿ ಶಾಸಕ ಎಸ್. ವಿ. ರಾಮಚಂದ್ರಪ್ಪ, ವಕೀಲರಾದ ಆಂಜನೇಯ ಗುರೂಜಿ, ಬೆಂಗಳೂರಿನ ತುಳಸಿ ರಾಮ್, ರಾಜ್ಯ ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಾಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ರಾಜ್ಯ ರೈತ ಮುಖಂಡ ಮಲ್ಲಾಪುರ ದೇವರಾಜ್, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಹಾಲಪ್ಪ ಹದಡಿ, ವಾಲ್ಮೀಕಿ ಗಜ ಪಡೇಯ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಬಿಳಚೋಡ, ಐಗೂರು ಹನುಮಂತಪ್ಪ, ಅವಗೆರೆ ಗೋಶಾಲ ಸುರೇಶ್, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.