SUDDIKSHANA KANNADA NEWS/ DAVANAGERE/ DATE:13-03-2024
ದಾವಣಗೆರೆ: ಸ್ವಲ್ಪ ಯಡವಟ್ಟಾಗಿದ್ದರೂ ಅನಾಹುತ ಸಂಭವಿಸುತಿತ್ತು. ಒಂದಲ್ಲಾ ಒಂದು ದೂರುಗಳಿಂದಲೇ ಸುದ್ದಿಯಲ್ಲಿರುತ್ತಿದ್ದ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಸ್ವಲ್ಪದರಲ್ಲಿಯೇ ದೊಡ್ಡ ಅನಾಹುತ ತಪ್ಪಿದೆ.
ಎಂದಿನಂತೆ ರೋಗಿಗಳು ಬೆಡ್ ಮೇಲೆ ಮಲಗಿದ್ದರು. ಇದ್ದಕ್ಕಿದ್ದಂತೆ ಸಿಜೆ ಆಸ್ಪತ್ರೆಯೊಳಗಿನ ರೋಗಿಗಳ ವಾರ್ಡ್ ನ ಮೇಲ್ಛಾವಣಿ ಕುಸಿದು ಬಿದ್ದಿದೆ. ರೋಗಿಗಳು ಆತಂಕಗೊಂಡು ಓಡಿ ಹೋದ ಘಟನೆಯೂ ನಡೆದಿದೆ.
ವಾರ್ಡ್ ನ ಬೆಡ್ ಮೇಲೆ ಚಿಕಿತ್ಸೆ ಪಡೆದು ರೋಗಿಗಳು ಮಲಗಿದ್ದರು. ಜಿಲ್ಲಾಸ್ಪತ್ರೆಯ 71-72 ನೇ ವಾರ್ಡ್ ನಲ್ಲಿ ರೋಗಿಗಳ ಮೇಲೆ ಮೇಲ್ವಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರೋಗಿಗಳು ಮಲಗಿದ್ದಾಗ ಏಕಾಏಕಿ ಮೇಲ್ಚಾವಣಿ ಬೀಳುತ್ತಿದ್ದಂತೆ ವಾರ್ಡ್ ನಲ್ಲಿದ್ದ ರೋಗಿಗಳು ಭಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಬಗ್ಗೆ ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ್ದ ಆರೋಗ್ಯ ಇಲಾಖೆ
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಗೆ ಬಡವರು ಚಿಕಿತ್ಸೆಗೆ ಬರುತ್ತಾರೆ. ಇದ್ದಕ್ಕಿದ್ದಂತೆ ಮತ್ತೊಂದು ಅನಾಹುತ ಸಂಭವಿಸಿದರೆ ಎಲ್ಲಿಗೆ ಹೋಗಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಕ್ರಮ ಜರುಗಿಸಬೇಕು. ಆರೋಗ್ಯ ಸಚಿವರು ಇತ್ತ ಗಮನ ಹರಿಸಬೇಕು. ಇಲ್ಲಿಗೆ ಭೇಟಿ ನೀಡಿ ಅವ್ಯವಸ್ಥೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರೋಗಿಗಳ ಸಂಬಂಧಿಕರು ಆಗ್ರಹಿಸಿದ್ದಾರೆ.
ಮೇಲ್ಛಾವಣಿ ಕುಸಿದು ಬೀಳುತ್ತಿದ್ದಂತೆ ರೋಗಿಗಳು ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ದಾರೆ. ಮಾತ್ರವಲ್ಲ, ಬೆಡ್ ಮೇಲೆ ಮಣ್ಣು ಬಿದ್ದಿದೆ. ರೋಗಿಗಳು ಪೂರ್ತಿ ಮೇಲ್ಛಾವಣಿ ಕುಸಿದು ಬಿದ್ದಿದ್ದರೆ ಗತಿ ಏನು? ಚಿಕಿತ್ಸೆ ಪಡೆದು ರೋಗಿಗಳು ಗುಣಮುಖರಾಗಲು ಇಲ್ಲಿಗೆ ಬರುತ್ತಾರೆ. ಆದ್ರೆ, ಈ ವಾರ್ಡ್ ಮಾತ್ರವಲ್ಲ, ಬೇರೆ ಕಡೆಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಹಾಗಾಗಿ, ಇಂಥ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ರೋಗಿಗಳು ಮನವಿ ಮಾಡಿದ್ದಾರೆ.