SUDDIKSHANA KANNADA NEWS/ DAVANAGERE/ DATE:15-03-2024
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಾರ್ಚ್ 16 ಮತ್ತು 17 ರಂದು ರಂದು ಹೈಸ್ಕೂಲ್ ಮೈದಾನದಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮದ ಅಂಗವಾಗಿ ಹಾಟ್ ಏರ್ ಬಲೂನ್ ಸಾಹಸ ಕ್ರೀಡೆಯನ್ನು ಆಯೋಜಿಸಲಾಗಿದೆ.
18 ರಿಂದ 29 ವರ್ಷವಯೋಮಾನದ ಯುವಕ ಮತ್ತು ಯುವತಿಯರು ಭಾಗವಹಿಸಲು ಅವಕಾಶ ಇರುತ್ತದೆ. ಮಾ.16 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ
ಕ್ರೀಡಾಂಗಣ, ದಾವಣಗೆರೆ ಇಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ನ ನಕಲು ಪ್ರತಿಯೊಂದಿಗೆ ರೂ.50/-ಗಳ ನೋಂದಣಿ ಶುಲ್ಕ ಪಾವತಿಸಿ, ಈ ಸಾಹಸ ಕ್ರೀಡೆಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ ಸಂ: 08192-237480 ಸಂಪರ್ಕಿಸಲು ಇಲಾಖೆಯ ಸಹಾಯಕ
ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.