ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

EXCLUSIVE: ಮಾ. 18ಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಕಟ: ಸಿಇಸಿ ಸಭೆ ಬಳಿಕ ಘೋಷಣೆ

On: March 15, 2024 10:07 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:16-03-2024

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಯತ್ರಿ ಸಿದ್ದೇಶ್ವರ ಅವರಿಗೆ ಈಗಾಗಲೇ ಪ್ರಕಟಿಸಲಾಗಿದೆ. ಆದ್ರೆ, ಎಐಸಿಸಿ ನಾಯಕರೊಬ್ಬರು ನೀಡಿರುವ ಮಾಹಿತಿ ಪ್ರಕಾರ ಮಾರ್ಚ್ 18ಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಲಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹಾಗೂ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಔಟ್ರೀಚ್ ರಾಜ್ಯ ಉಪಾಧ್ಯಕ್ಷ ಬಿ. ಜಿ. ವಿನಯ್ ಕುಮಾರ್ ನಡುವೆ ಟಿಕೆಟ್ ಪಡೆಯಲು ನೇರ ಹಣಾಹಣಿ ಏರ್ಪಟ್ಟಿದೆ. ದಾವಣಗೆರೆ ಪ್ರತ್ಯೇಕ ಜಿಲ್ಲೆಯಾದ ಬಳಿಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯದ್ದೇ ಪಾರುಪತ್ಯ. ಮಲ್ಲಿಕಾರ್ಜುನಪ್ಪ ಎರಡು ಬಾರಿ ಹಾಗೂ ಸಂಸದ ಜಿ. ಎಂ. ಸಿದ್ದೇಶ್ವರ ಅವರು ನಾಲ್ಕು ಬಾರಿ ಜಯಶಾಲಿ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಣಿಯಲು ಹೈಕಮಾಂಡ್ ಅಳೆದು ತೂಗಿ ಲೆಕ್ಕಾಚಾರ ಹಾಕಲಾಗಿದೆ.

ಸದ್ಯಕ್ಕೆ ಈಗಲೂ ಪ್ರಭಾ ಮಲ್ಲಿಕಾರ್ಜುನ್ ಹಾಗೂ ವಿನಯ್ ಕುಮಾರ್ ನಡುವೆ ನೇರಾ ಪೈಪೋಟಿ ಇದೆ. ಸಿಎಂ ಸಿದ್ದರಾಮಯ್ಯ ಅವರು ವಿನಯ್ ಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಯುವಕರಾಗಿದ್ದು, ಪಾದಯಾತ್ರೆ ಮೂಲಕ ಎಲ್ಲ ವರ್ಗದವರ ಗಮನ ಸೆಳೆದಿದ್ದಾರೆ. ಜೊತೆಗೆ ಶಿಕ್ಷಣ ತಜ್ಞರೂ ಆಗಿದ್ದಾರೆ. ಯುವಕರಿಗೆ ಆದ್ಯತೆ ನೀಡಬೇಕೆಂಬ ರಾಹುಲ್ ಗಾಂಧಿ ಅವರ ಅಪೇಕ್ಷೆಯಂತೆ ವಿನಯ್ ಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡಿರುವುದರಿಂದ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಘೋಷಣೆ ಮಾಡಬೇಕೆಂಬುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಡಿ. ಕೆ. ಶಿವಕುಮಾರ್ ಅವರ ವಾದ.

ಪ್ರಭಾ ಮಲ್ಲಿಕಾರ್ಜುನ್ ಅವರು ಸಹ ಸಾಕಷ್ಟು ಸಮಾಮುಖಿ ಕಾರ್ಯ ನಿರ್ವಹಿಸಿದ್ದಾರೆ. ಆದ್ರೆ, ಇದುವರೆಗೆ ಟಿಕೆಟ್ ಆಕಾಂಕ್ಷಿಯಂತಲೂ, ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳಿಲ್ಲ. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅವರು ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಹೇರುತ್ತಿದ್ದಾರೆ. ಮತ್ತೊಂದೆಡೆ ವಿನಯ್ ಕುಮಾರ್ ನಾನು ಟಿಕೆಟ್ ಆಕಾಂಕ್ಷಿ. ಕಳೆದೊಂದು ವರ್ಷದಿಂದ ಜಿಲ್ಲೆಯಾದ್ಯಂತ ಓಡಾಡಿದ್ದೇನೆ. ಎಲ್ಲಾ ವರ್ಗದವರ ಪ್ರೀತಿ ಸಂಪಾದನೆ ಮಾಡಿದ್ದೇನೆ. ಈ ಬಾರಿಯ ಟಿಕೆಟ್ ನನಗೆ ನೀಡಿದರೆ ಒಂದೂವರೆಯಿಂದ ಎರಡು ಲಕ್ಷ ಮತಗಳ ಅಂತರದಲ್ಲಿ ಜಯಭೇರಿ ಬಾರಿಸುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನಸೇವೆ, ಸಾಮಾಜಿಕ ಸೇವೆ, ಆರೋಗ್ಯದ ಬಗ್ಗೆ ಕಾಳಜಿ ಸೇರಿದಂತೆ ಜನರಿಗೆ ಹತ್ತಿರವಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಪೈಪೋಟಿ ನೀಡುವಂತೆ ವಿನಯ್ ಕುಮಾರ್ ಅವರೂ ಸಹ ಪ್ರಯತ್ನ ಮುಂದುವರಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಪ್ರಭಾ ಮಲ್ಲಿಕಾರ್ಜುನ್ ಅವರು, ಆರೋಗ್ಯ ಸೇವೆ, ಕ್ಯಾನ್ಸರ್ ಕುರಿತ ಜಾಗೃತಿ ಸೇರಿದಂತೆ ಇತರೆ ಸಾಮಾಜಿಕ ಕಾರ್ಯಗಳು ಮುಂದುವರಿಯಲಿದೆ. ರಾಜಕೀಯಸ್ಕೋರ ಮಾಡುತ್ತಿಲ್ಲ. ಈ ಸೇವೆ ನಿರಂತರವಾಗಿರುತ್ತದೆ. ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಕಾರ್ಯಕರ್ತರು, ಮುಖಂಡರ ಒತ್ತಡದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಟಿಕೆಟ್ ಘೋಷಣೆಯಾದ ಬಳಿಕ ನೋಡೋಣ. ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದಿದ್ದಾರೆ. ಒಂದು ವೇಳೆ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದರೆ ಮಹಿಳಾ ಕದನಕ್ಕೆ ವೇದಿಕೆ ಸಿದ್ಧವಾಗಲಿದೆ. ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಿರುವುದರಿಂದ ಕದನ ಕಣ ಕುತೂಹಲ ಕೆರಳಿಸಿದೆ.

ಇನ್ನು ವಿನಯ್ ಕುಮಾರ್ ಅವರೂ ಸಹ ಟಿಕೆಟ್ ಗೆ ಪೈಪೋಟಿ ಮುಂದುವರಿಸಿದ್ದಾರೆ. ಕೊನೆ ಕ್ಷಣದಲ್ಲಿಯಾದರೂ ಸಿಗುವ ವಿಶ್ವಾಸದಲ್ಲಿರುವ ವಿನಯ್ ಕುಮಾರ್ ಅವರು, ನನಗೆ ಟಿಕೆಟ್ ಸಿಗುವ ವಿಶ್ವಾಸ ಇದೆ. ಮಾರ್ಚ್ 18ಕ್ಕೆ ಚುನಾವಣಾ ಸಮಿತಿ ಸಭೆ ಇದ್ದು, ಆ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ. ಹೈಕಮಾಂಡ್ ಟಿಕೆಟ್ ಘೋಷಿಸಿದ ಬಳಿಕವಷ್ಟೇ ಯಾರು ಅಭ್ಯರ್ಥಿ ಎಂಬುದು ಗೊತ್ತಾಗಲಿದೆ. ಅಲ್ಲಿಯವರೆಗೆ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಬಿಜೆಪಿಯಲ್ಲಿನ ಒಳಬೇಗುದಿ, ಕಾಂಗ್ರೆಸ್ ನಲ್ಲಿ ಇನ್ನು ಅಭ್ಯರ್ಥಿ ಘೋಷಣೆಯಾಗದಿರುವುದು ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿಸಿದ್ದು, ಆರು ಬಾರಿ ಕಾಂಗ್ರೆಸ್ ಹಾಗೂ ಆರು ಬಿಜೆಪಿ ಈ ನೆಲದಲ್ಲಿ ಜಯ ಗಳಿಸಿರುವ ಕಾರಣ ಏಳನೇ ಬಾರಿ ತೀವ್ರ ಪೈಪೋಟಿ ನಡೆಯುವುದಂತೂ ನಿಜ. ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದರೆ, ಒಳಬೇಗುದಿ ಎಷ್ಟರ ಮಟ್ಟಿಗೆ ಬಿಸಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment