ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯಡಿಯೂರಪ್ಪ ಪಕ್ಷ ಬಿಟ್ಟು ಹೋಗು ಎಂದಿಲ್ಲ, ಎಚ್ಚರಿಕೆ ಕೊಟ್ಟಿಲ್ಲ: ಇದೊಂದು ಷಡ್ಯಂತ್ರ ಎಂದಿದ್ಯಾಕೆ ಎಂ. ಪಿ. ರೇಣುಕಾಚಾರ್ಯ…?

On: March 20, 2024 11:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-03-2024

ದಾವಣಗೆರೆ: ಕೆಲ ಮಾಧ್ಯಮಗಳಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ನನಗೆ ಎಚ್ಚರಿಕೆ ನೀಡಿದ್ದಾರೆ. ಇದೇ ಧೋರಣೆ ಮುಂದುರಿಸಿದರೆ ನಿನ್ನ ದಾರಿ ನೋಡಿಕೋ, ಪಕ್ಷ ಬಿಟ್ಟು ಹೋಗು ಎಂದು ಹೇಳಿಲ್ಲ. ಆದ್ರೆ, ಕೆಲ ಮಾಧ್ಯಮಗಳಲ್ಲಿ ವರದಿ ಬಂದಿದೆ. ಇದು ಸತ್ಯಕ್ಕೆ ದೂರ. ಇದರ ಹಿಂದೆ ಷಡ್ಯಂತ್ರ ಅಡಗಿದೆ. ನನಗೆ ಯಾವುದೇ ಸೂಚನೆ, ಎಚ್ಚರಿಕೆ ಬಂದಿಲ್ಲ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಸ್ಪಷ್ಟನೆ ನೀಡಿದರು.

ದಾವಣಗೆರೆ ದುರ್ಗಾಂಬಿಕಾ ದೇವಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಕುರಿತಂತೆ ನಮ್ಮ ಅಭಿಪ್ರಾಯಗಳನ್ನು ವರಿಷ್ಠರಿಗೆ ಈಗಲೂ ಹಾಗೂ ಈ ಹಿಂದೆಯೇ ತಿಳಿಸಿದ್ದೇವೆ. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವಲ್ಲ. ಆದ್ರೆ, ಮಾಧ್ಯಮಗಳಲ್ಲಿ ಈ ರೀತಿ ಬಂದಿದೆ. ಈ ರೀತಿಯಾದ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ತಿಳಿಸಿದರು.

ಯಡಿಯೂರಪ್ಪ ಅವರು ನಮ್ಮ ನಾಯಕರು ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಮಾಧ್ಯಮಗಳಲ್ಲಿ ಭಿನ್ನಮತೀಯ, ರೆಬೆಲ್, ಬಂಡಾಯಗಾರ ಎಂದೆಲ್ಲಾ ಬಿರುದು ನೀಡಿದ್ದಾರೆ. ಆದ್ರೆ, ನನಗೇನೂ ಬೇಸರ ಇಲ್ಲ. ನಾವೇನೂ ಬಂಡಾಯ ಎದ್ದಿಲ್ಲ. ನಾಲ್ಕು ಗೋಡೆಗಳ ಮಧ್ಯೆ ನಮ್ಮ ಅಭಿಪ್ರಾಯ ಹೇಳಿದ್ದೇವೆ. ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರು, ಜನರ ಅಭಿಪ್ರಾಯ ತಿಳಿಸಿದ್ದೇವೆ. ನಾವು ಈಗಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು ಎಂಬ ನಿಲುವು ಹೊಂದಿದ್ದೇವೆ, ಇದಕ್ಕಾಗಿ ಹೋರಾಟ ಮಾಡುತ್ತೇವೆ ಎಂದಿದ್ದೇವೆ. ಆದ್ರೆ, ನಮ್ಮ ಭಾವನೆಗಳನ್ನು ಹೇಳಿಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪಿಎಂ ಆಗಲು ಎಲ್ಲಾ ರೀತಿಯ ಶ್ರಮ ಹಾಕುತ್ತೇವೆ. ಇದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ನಾವೆಲ್ಲಿಯೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ತಪ್ಪೇನೂ ಮಾಡಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟನೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment