ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾಂಗ್ರೆಸ್ ಹೇಳೋದೊಂದು ಮಾಡದೊಂದು, ಬಣ್ಣ ಸದ್ಯದಲ್ಲೇ ಬಯಲಾಗುತ್ತೆ: ಬಸವರಾಜ್ ಬೊಮ್ಮಾಯಿ ಸಿಡಿಮಿಡಿ

On: May 29, 2023 11:35 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-05-2023

ಬೆಂಗಳೂರು(BANGALORE): ಕಾಂಗ್ರೆಸ್ ಹೇಳೋದೊಂದು ಮಾಡದೊಂದು, ಬಣ್ಣ ಸದ್ಯದಲ್ಲೇ ಬಯಲಾಗುತ್ತೆ ಎಂದು ಬಸವರಾಜ್ ಬೊಮ್ಮಾಯಿ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು
ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಆರೋಪಿಸಿದರು.

ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.

ರಾಜಕಾರಣ ಮಾಡಿದ್ರೆ ನಷ್ಟ:

ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ವಿಶ್ವ ಮಾನ್ಯ ನಾಯಕರಾದಂತಹ ನರೇಂದ್ರ‌ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. ಒಂಭತ್ತು ವರ್ಷದಲ್ಲಿ ಸಾಕಷ್ಟು ಬದಲಾಗಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತೀಕರಣ ಆಗಿರುವುದನ್ನು ನಾವು ನೋಡಿದ್ದೇವೆ ಎಂದರು.

ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ:

ಪ್ರಧಾನಿ ಮೋದಿ ಅಧಿಕಾರ ತೆಗೆದುಕೊಂಡಾಗ ಆರ್ಥಿಕ ಪರಿಸ್ಥಿತಿ ಸರಿಯಾಗಿರಲಿಲ್ಲ. ಭಾರತದ ವಿಶ್ವಾಸಾರ್ಹತೆ ಕುಸಿತ ಕಂಡಿತ್ತು. ಇಂತಹ ಸಂದರ್ಭದಲ್ಲಿ ಮೋದಿಯವರು ತಾವು ಗುಜರಾತಿನ ಮುಖ್ಯಮಂತ್ರಿಯಾಗಿ ಪಡೆದಿದ್ದ ಅನುಭವ ಹಾಗೂ ಇಡೀ ದೇಶ ಅರಿತಿದ್ದರಿಂದ ದೇಶದ ಆಂತರಿಕ ಮತ್ತು ಬಾಹ್ಯ ಸುರಕ್ಷತೆಗೆ ಒತ್ತು ಕೊಟ್ಟಿದ್ದಾರೆ ಎಂದರಲ್ಲದೇ, ಯುಪಿಎ ಅವಧಿಯಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿತ್ತು. ರಾಷ್ಟ್ರದ ಸುರಕ್ಷತೆ ಮತ್ತು ಏಕತೆ ಅಖಂಡತೆಯನ್ನು ಕಾಪಾಡುವ ಕೆಲಸ ಮಾಡಿದರು. ಆರ್ಟಿಕಲ್ 370 ರದ್ದು ಮಾಡುವ ಮೂಲಕ ದೇಶದ ಏಕತೆ ಕಾಪಾಡಿದರು. ಪ್ರಧಾನಿಯಾದ ಮೇಲೆ ಮೋದಿಯವರು ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿ.ಎಸ್.ಟಿ ಜಾರಿಗೆ ತಂದರು. ಇದರಿಂದ ದೇಶ ಹಾಗೂ ರಾಜ್ಯಗಳ ಆರ್ಥಿಕ ಪ್ರಗತಿ ಹೆಚ್ಚಾಯಿತು. ಮೊದಲ ಐದು ರಾಜ್ಯಗಳಿಗೆ 14% ಗ್ಯಾರಂಟಿ ಫಂಡ್ ಬರುವಂತೆ ಮಾಡಿದರು ಎಂದರು.

ನರೇಂದ್ರ ಮೋದಿ ನೀತಿ ಆಯೋಗ ಜಾರಿಗೆ ತಂದು, ರಾಜ್ಯಗಳಿಗೆ 40 ರಷ್ಟು ಫಂಡ್ ಡೆವ್ಯಲೂಸನ್ ಮಾಡಿದರು. ಶಿಕ್ಷಣ ಪದ್ದತಿಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಎನ್ ಇಪಿ ಜಾರಿಗೆ ತಂದಿದ್ದಾರೆ. ಕರ್ನಾಟಕ ಎನ್ ಇ ಪಿ ಜಾರಿಗೆ ತಂದಿರುವ ಮೊದಲ ರಾಜ್ಯವಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಗೆಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.

ಕಳೆದ ಎಪ್ಪತ್ತು ವರ್ಷದಲ್ಲಿ ನಾಲ್ಕೂವರೆ ಸಾವಿರ ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿತ್ತು. ಕಳೆದ ಒಂಬತ್ತು ವರ್ಷದಲ್ಲಿ 5 ಸಾವಿರ ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ವಿಶೇಷ ಅನುದಾನ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5 ಸಾವಿರ ಕೋಟಿ ನೀಡಿದೆ. ಮೆಟ್ರೋ ಯೋಜನೆಗೆ ಐದು ಸಾವಿರ ಕೋಟಿ ನೀಡಲಾಗಿದೆ. ನಾಲ್ಕು ಮೆಡಿಕಲ್ ಕಾಲೇಜು, ಐಐಟಿ, ಕರಾವಳಿ ಅಭಿವೃದ್ಧಿಗೆ 1250 ಕೋಟಿ ನೀಡಿದ್ದಾರೆ. ಕರಾವಳಿಯಲ್ಲಿ ಸಿಆರ್ ಝಡ್ ಗೆ ಅನುಮತಿ ನೀಡಿದ್ದಾರೆ. ಕಲಬುರ್ಗಿಯಲ್ಲಿ 1 ಲಕ್ಷ ಉದ್ಯೋಗ ನೀಡುವ ಜವಳಿ ಪಾರ್ಕ್ ಗೆ ಅನುಮತಿ ನೀಡಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ರಾಜ್ಯ ಸರ್ಕಾರ ರಾಜ್ಯದ ಜನತೆಗೆ ತಲುಪಿಸುವ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸುಮಾರು 54 ಲಕ್ಷ ರೈತರಿಗೆ ಸುಮಾರು 16000 ಕೋಟಿ ರೂ. ನೇರವಾಗಿ ರೈತರಿಗೆ ತಲುಪಿದೆ. ಪ್ರಧಾನ ಮಂತ್ರಿ ಅವಾಸ್ ಯೋಜನೆ
ಅಡಿಯಲ್ಲಿ ಎಲ್ಲರಿಗೂ ಸೂರು ಕಲ್ಪಿಸುವ ಕೆಲಸ ಮಾಡಲಾಗಿದೆ. ಮೋದಿ ಅವರು ಪ್ರಧಾನಿಯಾದ ಮೇಲೆ ವಿಶ್ವಮಾನ್ಯತೆ‌ ದೊರೆತಿದೆ ಎಂದು ಹೇಳಿದರು.

ಮುದ್ರಾ ಯೋಜನೆ ಅಡಿಯಲ್ಲಿ 60 ಲಕ್ಷ ಉದ್ಯಮಿಗಳಿಗೆ ಅನುಕೂಲವಾಗಿದೆ‌. ರೈತರಿಗೆ ಅತ್ಯಂತ ಪ್ರಮುಖವಾಗಿ ಎಮ್ ಎಸ್ ಪಿ ನೀಡುವ ಮೂಲಕ ರೈತರ ನೆರವಿಗೆ ನಿಂತಿದ್ದಾರೆ. ಭಾರತ ಆರ್ಥಿಕವಾಗಿ ಸಾಕಷ್ಟು ಸಮರ್ಥವಾಗಿದ್ದು ಐದು ಟ್ರಿಲಿಯನ್ ಆರ್ಥಿಕತೆ ಮಾಡುವ ಗುರಿಗೆ ಕರ್ನಾಟಕವೂ ಕೂಡ ಒಂದು ಟ್ರಿಲಿಯನ್ ಆರ್ಥಿಕ ಶಕ್ತಿ ಮುಟ್ಟಲಿದೆ. ಪ್ರಧಾನಿಯವರು ತಾವೇ ಆರಂಭಿಸುವ ಯೋಜನೆಗಳನ್ನು ತಾವೇ ಉದ್ಘಾಟನೆ ಮಾಡಿದ್ದಾರೆ. ಈಶಾನ್ಯ ರಾಜ್ಯಗಳ ಯೋಜನೆಗಳು, ಕಾಶ್ಮೀರ ಟನೆಲ್ ಗಳು, ಎಚ್ ಎ ಎಲ್ ವಿಮಾನ ನಿರ್ಮಾಣ ಮಾಡುವ ಕೆಲಸ ಮಾಡಿದೆ. ಹೀಗಾಗಿ ಮೋದಿ ನೇತೃತ್ವದ ಸರ್ಕಾರ ಭಾರತವನ್ನು ವಿಶ್ವ ಮಾನ್ಯ ಮಾಡುವ ನಿಟ್ಟಿನಲ್ಲಿ ಅವರ ಆಡಳಿತ ಮುಂದುವರೆಯಬೇಕು ಎಂದರು.

 

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment