SUDDIKSHANA KANNADA NEWS/ DAVANAGERE/ DATE:30-05-2023
ಮೈಸೂರು: ಅದು ಸುಖಿ ಕುಟುಂಬ. ಒಂದೇ ಕುಟುಂಬದ 10 ಮಂದಿ ಪ್ರವಾಸಕ್ಕೆಂದು ಬಂದಿದ್ದರು. ಇನ್ನೋವಾ ಕಾರಿನಲ್ಲಿ ಬಂದಿದ್ದವರು ಎಂಜಾಯ್ ಮಾಡಲಿಕ್ಕೆ. ಆದ್ರೆ ವಿಧಿಯಾಟವೇ ಬೇರೆ ಇತ್ತು. ಸಂತಸದ ಕ್ಷಣ ಕಳೆಯಲು ಬಂದವರು ಸೇರಿದ್ದು ಮಾತ್ರ ಮಸಣಕ್ಕೆ.
ಹೌದು. ಮೈಸೂರು ಜಿಲ್ಲೆಯ ಟಿ. ನರಸೀಪುರದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಬಲಿಯಾಗಿದ್ದಾರೆ. ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ.
ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದ್ದು, ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದಾರೆ. ಇನ್ನೋವಾ ಕಾರಿನಲ್ಲಿ ಮೈಸೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಇವರ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಖಾಸಗಿ ಬಸ್-ಕಾರು ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವಂತ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.