ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೆಎಎಸ್ ಅಧಿಕಾರಿಯ ಪತ್ನಿ ನಿಗೂಢ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

On: May 11, 2024 4:36 PM
Follow Us:
---Advertisement---

ಬೆಂಗಳೂರು: ಕೆ ಐಎಡಿಬಿ ಸಹಯಾಕ ಆಯುಕ್ತ ಶಿವಕುಮಾರ್ ಪತ್ನಿ ಚೈತ್ರಾಗೌಡ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಯ್ಯ ಲೇಔಟ್ ನ ಮನೆಯಲ್ಲಿ ಶವ ಪತ್ತೆಯಾಗಿದ್ದು ಇಂದು ಚೈತ್ರಾ ಕುಟುಂಬಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಚೈತ್ರ ಹೈಕೋರ್ಟ್ ಅಡ್ವೋಕೇಟ್ ಆಗಿದ್ದು ಮಾಡಲಿಂಗ್ ಮತ್ತು ಕ್ರಿಡೆಯಲ್ಲೂ ತಮ್ಮನ್ನ ತಾವು ತೊಡಗಿಸಿಕೊಂಡಿದ್ರು. ಕೆಎಎಸ್ ಅಧಿಕಾರಿ ಶಿವಕುಮಾರ್ 2016ರಲ್ಲಿ ಚೈತ್ರಾಳನ್ನ ಪ್ರೀತಿಸಿ ಎರಡನೇ ಮದುವೆಯಾಗಿದ್ರು ಎಂದು ತಿಳಿದು ಬಂದಿದೆ.

ಇಂದು ಚೈತ್ರಾ ಬಿ.ಗೌಡ (35) ಮನೆಯಲ್ಲೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ‌. ವೃತ್ತಿಯಲ್ಲಿ ವಕೀಲೆಯಾಗಿದ್ದ ಈಕೆ ಪ್ರವೃತ್ತಿಯಲ್ಲಿ ಮಾಡೆಲ್‌ ಆಗಿ ಗುರುತಿಸಿಕೊಂಡಿದ್ದಳು. ದಂಪತಿ ನಡುವೆ ವೈಮನಸ್ಸಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ‌ಮನೆಯವರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಳ ಮನೆಯವರು ಸಾವಿಗೆ ಗಂಡನೇ ಹೊಣೆ ಎಂದು ಆರೋಪಿಸಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment