ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆ

On: May 19, 2024 6:17 PM
Follow Us:
---Advertisement---

ತಿರುವನಂತಪುರಂ: ಕೇರಳದ ಕೆಲವು ರಾಜ್ಯಗಳಾದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ರೆಡ್ ಅಲರ್ಟ್‌ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.

ಭಾರೀ ಮಳೆಯ ಹಿನ್ನೆಲೆ ತಿರುವನಂತಪುರಂ, ಕೊಲ್ಲಂ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಣ್ಣೂರು ಮತ್ತು ಕೋಝಿಕ್ಕೋಡ್ ಹೊರತುಪಡಿಸಿ ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀಗಿಂತ ಹೆಚ್ಚು ಮಳೆಯನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ ಮಳೆ 6 ಸೆಂ.ಮೀ ನಿಂದ 20 ಸೆಂ.ಮೀ. ಹೆಚ್ಚು ಮಳೆ ಸೂಚಿಸಿದರೆ ಯೆಲ್ಲೋ ಅಲರ್ಟ್ 6- 11 ಸೆಂ.ಮೀ ಮಳೆಯನ್ನು ಸೂಚಿಸುತ್ತದೆ.

ಬಲವಾದ ಗಾಳಿ ಮತ್ತು ಪ್ರಕ್ಷುಬ್ಧ ವಾತಾವರಣದ ಕಾರಣ ಮುಂದಿನ ಸೂಚನೆ ನೀಡುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾನುವಾರದಿಂದ ಮೇ 22ರ ನಡುವೆ ರಾಜ್ಯದ ಕೆಲವು ಸ್ಥಳಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

Join WhatsApp

Join Now

Join Telegram

Join Now

Leave a Comment