ಬ್ರೊಕೊಲಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬ್ರೊಕೊಲಿಯನ್ನು ಹೆಚ್ಚಾಗಿ ಮಿತವಾಗಿ ಆಹಾರ ಸೇವಿಸುವವರು ತಿನ್ನುತ್ತಾರೆ. ದೇಹದಲ್ಲಿರುವ ಕೆಟ್ಟ ಕೊಲೆಸ್ಟಾಲ್ ವಿರುದ್ದ ಹೋರಾಡಲು ಬ್ರೊಕೊಲಿ ಸಹಾಯ ಮಾಡುತ್ತದೆ.
ಇದರಲ್ಲಿರುವ ನಾರಿನಂಶವು ಹೆಚ್ಚು ಕಾಲ ಹೊಟ್ಟೆ ತುಂಬಿರುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ. ಕೋಸುಗಡ್ಡೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಜೀವಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ.