Home ನವದೆಹಲಿ ಗೊಂದಲಕ್ಕೆ ಹೈಕಮಾಂಡ್ ಇತಿಶ್ರೀ ಹಾಡಬೇಕು, ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ: ಹೊಸ ದಾಳ ಉರುಳಿಸಿದ ಸಿಎಂ ಸಿದ್ದರಾಮಯ್ಯ!
ನವದೆಹಲಿಬೆಂಗಳೂರು

ಗೊಂದಲಕ್ಕೆ ಹೈಕಮಾಂಡ್ ಇತಿಶ್ರೀ ಹಾಡಬೇಕು, ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ: ಹೊಸ ದಾಳ ಉರುಳಿಸಿದ ಸಿಎಂ ಸಿದ್ದರಾಮಯ್ಯ!

Share
ಸಿದ್ದರಾಮಯ್ಯ
Share

SUDDIKSHANA KANNADA NEWS/DAVANAGERE/DATE:25_11_2025

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರ ಭೇಟಿ ಸದ್ಯಕ್ಕಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ದಾಳ ಉರುಳಿಸಿದ್ದಾರೆ.

READ ALSO THIS STORY: BIG NEWS: ದಾವಣಗೆರೆಯಲ್ಲಿ ರಕ್ಷಕರೇ ಭಕ್ಷಕರಾಗಿ ಸಿಕ್ಕಿಬಿದ್ದಿದ್ದೇ ರೋಚಕ: ಇಬ್ಬರು ಪಿಎಸ್ಐಗಳು ಸೇರಿ ನಾಲ್ವರ ಬಂಧನ!

ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣಎಯನ್ನು ಪಕ್ಷದ ವರಿಷ್ಠರು ಸೂಚನೆ ಕೊಟ್ಟಾಗ ಮಾಡಲಾಗುವುದು. ಸದ್ಯಕ್ಕೆ ರಾಹುಲ್ ಗಾಂಧಿ ಭೇಟಿ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆ ಬಿಕ್ಕಟ್ಟು ಶಮನಕ್ಕೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಚರ್ಚೆಯ ನಡುವೆ ಸಿದ್ದರಾಮಯ್ಯರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಗೊಂದಲಗಳಿಗೆ ಹೈಕಮಾಂಡ್ ಇತಿಶ್ರೀ ಹಾಡಬೇಕು:

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ  ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

Share

Leave a comment

Leave a Reply

Your email address will not be published. Required fields are marked *