Post Office Recruitment 2024: ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಮೇ 31, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 31, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರದ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್
ಸ್ಕಿಲ್ ಟೆಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 31, 2024 (ನಾಳೆ)