ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ.
ನಿಮ್ಮ ಖಾತೆಗೆ ಮೇ ತಿಂಗಳ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್ ಲಿಂಕ್ ಬಿಡುಗಡೆ ಮಾಡಿದೆ. ಹೌದು, ಕರ್ನಾಟಕ ಸರ್ಕಾರದ ವೆಬ್‌ಸೈಟ್ https://wwwkarnataka.gov.in/ ಗೆ ಭೇಟಿ ನೀಡಿ ನಿಮ್ಮ ಹಣದ ಕುರಿತು ಮಾಹಿತಿ ಪಡೆಯಬಹುದು.