SUDDIKSHANA KANNADA NEWS/ DAVANAGERE/ DATE:04-06-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸುಗೊಂಡಿದ್ದು, 9ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಭಾರೀ ಹಿನ್ನೆಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಬರೋಬ್ಬರಿ 40 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. 9ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು 40 ಸಾವಿರ ಮತಗಳಿಂದ ಮುಂದಿದ್ದು, ಬಿಜೆಪಿಗೆ ಭಾರೀ ಹಿನ್ನೆಡೆ ಆಗಿದೆ.
40 ಸಾವಿರ ಮತಗಳ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮುನ್ನುಗ್ಗುತ್ತಿರುವ ಕಾಂಗ್ರೆಸ್, ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಇದು ಬಿಜೆಪಿಗೆ ಹಿನ್ನೆಡೆ ತಂದಿದ್ದು, ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ನಿರೀಕ್ಷಿಸಿದಷ್ಟು ಇದುವರೆಗೆ ಮತಗಳು ಬಂದಿಲ್ಲ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಬರೋಬ್ಬರಿ 29,046 ಮತಗಳ ಮುನ್ನಡೆ ಪಡೆಯುವ ಮೂಲಕ ಸುತ್ತಿನ ಮತ ಎಣಿಕೆ ಮುಗಿಯುತ್ತಿದ್ದಂತೆ ಮುನ್ನಡೆಯೂ ಹೆಚ್ಚಾಗುತ್ತಿದೆ.
ನಾಲ್ಕನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಗಾಯಿತ್ರಿ ಸಿದ್ದೇಶ್ವರ ಅವರು ಮತ್ತೆ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಹಾವು ಏಣಿ ಐಟ ಮುಂದುವರಿದಿದ್ರೂ ನಾಲ್ಕನೇ ಸುತ್ತಿನ ಬಳಿಕ ಡಾ. ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಕಾಯ್ದುಕೊಳ್ಳುತ್ತಲೇ ಇದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಬಿರುಸು ಪಡೆದಿದ್ದು, ಹಾವು ಏಣಿ ಆಟ ಮುಂದುವರಿದಿದೆ. ನಾಲ್ಕನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ ಅವರು ಮತ್ತೆ ಹಿನ್ನೆಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದು, 3112 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು, ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನೆಡೆ ಆಗಿದ್ದು, ಐದನೇ ಸುತ್ತಿನ ಮತ ಎಣಿಕೆಯಲ್ಲಿ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸು ಪಡೆದಿದ್ದು, ಮೂರು ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ನ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ನಾಲ್ಕನೇ ಸುತ್ತಿನಲ್ಲಿ ಹಿನ್ನೆಡೆ ಹೊಂದಿದ್ದಾರೆ. ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ ಮುನ್ನಡೆ ಸಾಧಿಸಿದ್ದಾರೆ.