ತುಮಕೂರು: ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆಯನ್ನು ತೆರೆದಿದೆ. ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ, ಮೊದಲ ಖಾತೆಯನ್ನು ಕರ್ನಾಟಕದಲ್ಲಿ ಬಿಜೆಪಿ ತೆರೆದಂತೆ ಆಗಿದೆ.
ತುಮಕೂರು ಲೋಕಸಭಾ ಕ್ಷೇತ್ರದ 15ನೇ ಸುತ್ತಿನಲ್ಲಿ ಮತಏಣಿಕೆ ಕಾರ್ಯದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 94482 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದರು.
ಇತ್ತೀಚಿನ ಮಾಹಿತಿಯಂತೆ ಅವರು ಭಾರೀ ಮತಗಳಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿಯನ್ನು ಘೋಷಣೆ ಮಾಡುವುದು ಮಾತ್ರವೇ ಬಾಕಿ ಇದೆ.