ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಗೆಲುವನ್ನು ಪಡೆದಿದ್ದಾರೆ.
ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿದಿದ್ದರು. ಇದೀಗ ಅವರು ಗೆಲುವನ್ನು ಪಡೆದುಕೊಂಡಿದ್ದಾರೆ.
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿದ್ದು ಸೋಲನ್ನು ಕಂಡಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾ ಮಲೈ ಅವರು ಕೊಯಂಬತ್ತೂರಿನಲ್ಲಿ ಚುನಾವಣಾ ಕಣಕ್ಕೆ ಇಳಿದಿದ್ದರು. ಪ್ರಧಾನಿ ಮೋದಿಯೇ ಬಂದು ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದರು. ಇದೀಗ ಅವರು ತೀವ್ರ ಹಿನ್ನಡೆಅನುಭವಿಸಿ ಸೋಲನ್ನು ಕಂಡಿದ್ದಾರೆ.